Saturday, 14th December 2024

ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ಇಬ್ಬರು ಪ್ರಾಧ್ಯಾಪಕರು

ತುಮಕೂರು: ಅಮೆರಿಕಾದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯವು ಹೊರತಂದಿರುವ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಹೆಚ್. ನಾಗಭೂಷಣ ಹಾಗೂ ರಸಾಯನಶಾಸ್ತ್ರ ವಿಭಾಗದ ಸಂಯೋಜಕ ಡಾ. ಡಿ. ಸುರೇಶ್ ಸ್ಥಾನ ಪಡೆದಿದ್ದಾರೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖ ಗಳು, ಸಹಲೇಖನಗಳು ಹಾಗೂ ಎಚ್-ಇಂಡೆಕ್ಸ್ ಗಳನ್ನು ಪರಿಗಣಿಸಿ ಜಾಗತಿಕ ಮಟ್ಟದಲ್ಲಿ ಶ್ರೇಷ್ಠ ಶೇ.2 ವಿಜ್ಞಾನಿಗಳ ಪಟ್ಟಿಯನ್ನು ಇತ್ತೀಚೆಗೆ ಪ್ರಕಟಿಸ ಲಾಗಿದೆ. ಈ ಪಟ್ಟಿಯಲ್ಲಿ ವಿವಿಯ ಇಬ್ಬರು ಪ್ರಾಧ್ಯಾಪಕರು ಗುರುತಿಸಿಕೊಂಡಿದ್ದಾರೆ.

ಜಾಗತಿಕ ಮಟ್ಟದಲ್ಲಿ ಸಿದ್ಧಪಡಿಸಲಾಗುವ ಈ ಪಟ್ಟಿಯಲ್ಲಿ ಒಟ್ಟು ಎರಡು ಲಕ್ಷದಷ್ಟು ಪ್ರಾಧ್ಯಾಪಕರಿದ್ದು, ಅವರನ್ನು 22 ವಿಭಾಗಗಳಲ್ಲಿ ಹಾಗೂ 176 ಉಪವಿಭಾಗಗಳಲ್ಲಿ ವಿಂಗಡಿಸಲಾಗಿದೆ. ಭಾರತದ 3796 ಪ್ರಾಧ್ಯಾಪಕರು ಮಾತ್ರ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ತುಮಕೂರು ವಿಶ್ವವಿದ್ಯಾನಿಲಯವು ಇದರಲ್ಲಿ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಡಾ. ನಾಗಭೂಷಣ ಹಾಗೂ ಡಾ. ಸುರೇಶ್ ಮೆಟೀರಿಯಲ್ಸ್/ಅಪ್ಲೆöÊಡ್ ಫಿಸಿಕ್ಸ್/ ಫಿಸಿಕ್ಸ್ ಮತ್ತು ಆಸ್ಟೊçÃನಮಿ ವಿಭಾಗದಲ್ಲಿ ಶ್ರೇಷ್ಠ ವಿಜ್ಞಾನಿಗಳ ಸ್ಥಾನ ಗಳಿಸಿದ್ದಾರೆ.

ಪಾವಗಡ ತಾಲ್ಲೂಕಿಗೆ ಸೇರಿದ ಈ ಇಬ್ಬರು ಪ್ರಾಧ್ಯಾಪಕರು ತಮ್ಮ ಸ್ವಂತ ಜಿಲ್ಲೆಯ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸುತ್ತಾ ಈ ಅವಿಸ್ಮರಣೀಯ ಸಾಧನೆ ಮಾಡಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು ಹಾಗೂ ಕುಲಸಚಿವರಾದ ಪ್ರೊ. ಕೆ. ಶಿವಚಿತ್ತಪ್ಪ ಇಬ್ಬರೂ ಪ್ರಾಧ್ಯಾಪಕರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.