ತುಮಕೂರು: ಗಣೇಶ ಚತುರ್ಥಿ ಅಂಗವಾಗಿ ಸೆಪ್ಟೆಂಬರ್ 7ರಿಂದ ಪ್ರಾರಂಭಗೊಳ್ಳುವ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಉತ್ಸವಗಳ ಆಚರಣೆ ಸಂದರ್ಭಗಳಲ್ಲಿ ಆಯೋಜಕರು ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕಾಗಿ ಸ್ಥಳೀಯ ಪ್ರಾಧಿಕಾರದಿಂದ ಪಡೆದಿರುವ ಅನುಮತಿ ಪತ್ರವನ್ನು ಬೆಸ್ಕಾಂ ಕಚೇರಿಗೆ ಸಲ್ಲಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಯೋಜಕರು ಗಣಪತಿ ಪ್ರತಿಷ್ಠಾಪನಾ ಪೆಂಡಾಲ್‌ಗಳಿಗೆ ಸುರಕ್ಷತೆಯಿಂದ ಕೂಡಿರುವ ಸೂಕ್ತ ವೈರಿಂಗ್ ಮಾಡಿಸಬೇಕು. ವೈರಿಂಗ್ ಸುರಕ್ಷತೆ ಬಗ್ಗೆ ಬೆಸ್ಕಾಂ ಸಿಬ್ಬಂದಿಗಳು ತಪಾಸಣೆ ನಡೆಸಿದ ನಂತರವಷ್ಟೇ ಅನುಮತಿ ಪತ್ರ ನೀಡಲಾಗುವುದು. ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅನುಮತಿ ಪಡೆಯದೆ ವಿದ್ಯುತ್‌ನಿಂದಾಗುವ ಅನಾಹುತಗಳಿಗೆ ಆಯೋಜಕರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ತಿಳಿಸಿದ್ದಾರೆ.