Friday, 20th September 2024

Tumkur_Yeshwantpur Memu Train: ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟ

ತುಮಕೂರು: ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆಯು ಸೆ.೨ರಂದು ಅನುಮೋದನೆ ನೀಡಿದೆ ಎಂದು ಕೇಂದ್ರದ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಜಿಲ್ಲಾ ಸಂಸದ ವಿ.ಸೋಮಣ್ಣ ತಿಳಿಸಿದ್ದಾರೆ.

ತುಮಕೂರುನಿಂದ ಬೆಂಗಳೂರು ಹಾಗೂ ಬೆಂಗಳೂರಿAದ ತುಮಕೂರಿಗೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜನತೆಯ ಬಹು ದಿನಗಳ ಬೇಡಿಕೆ ನೆರವೇರಿದಂತಾಗಿದೆ. 

ಈ ಮೆಮು ರೈಲು ತುಮಕೂರು-ಯಶವಂತಪುರ ಮೆಮು ಟ್ರೆöÊನ್ ೦೬೨೦೧(೬೬೫೬೧) ಬೆಳಿಗ್ಗೆ ೮.೫೫ಕ್ಕೆ ತುಮಕೂರಿನಿಂದ ಹೊರಟು ಬೆಳಿಗ್ಗೆ ೧೦.೨೫ಕ್ಕೆ ಯಶವಂತಪುರ ತಲುಪಲಿದೆ. ಟ್ರೆöÊನ್ ಸಂಖ್ಯೆ ೦೬೨೦೨(೬೬೫೬೨) ಯಶವಂತಪುರದಿAದ ಸಂಜೆ ೫.೪೦ಕ್ಕೆ ಹೊರಟು ಸಾಯಂಕಾಲ ೭.೦೫ಕ್ಕೆ ತುಮಕೂರು ತಲುಪಲಿದೆ. ಪ್ರತಿ ಸೋಮವಾರ ವಿಶೇಷ ಮೆಮು ಟ್ರೈನ್ ನಂಬರ್ ೦೬೨೦೫(೬೫೬೫) ಬಾಣಸವಾಡಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ ೬.೧೫ಕ್ಕೆ ಹೊರಟು ತುಮಕೂರಿಗೆ ಬೆ. ೮.೩೫ಕ್ಕೆ ತಲುಪಲಿದೆ. ಅದೇ ರೀತಿ ಪ್ರತಿ ಶನಿವಾರ ವಿಶೇಷ ಮೆಮು ಟ್ರೈನ್ ನಂಬರ್ ೦೬೨೦೬(೬೬೫೬೬) ತುಮಕೂರಿನಿಂದ ಸಾಯಂಕಾಲ ೭.೪೦ಕ್ಕೆ ಹೊರಟು ರಾತ್ರಿ ೧೦.೦೫ಕ್ಕೆ ಬಾಣಸವಾಡಿ ತಲುಪಲಿದೆ. 

ಈ ಮೆಮು ರೈಲು ಮಾರ್ಗ ಮಧ್ಯದಲ್ಲಿ ಕ್ಯಾತಸಂದ್ರ, ಹೀರೇಹಳ್ಳಿ, ದಾಬಸ್‌ಪೇಟೆ, ನಿಡವಂದ, ಮುದ್ದಲಿಂಗನಹಳ್ಳಿ, ದೊಡ್ಡಬೆಲೆ, ಭೈರನಾಯಕನಹಳ್ಳಿ, ಗೊಲ್ಲಹಳ್ಳಿ, ಸೋಲದೇವನಹಳ್ಳಿ, ಚಿಕ್ಕಬಾಣಾವರ ರೈಲ್ವೆ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಭಾನುವಾರ ಹೊರತುಪಡಿಸಿ ವಾರದ ೬ ದಿನಗಳಲ್ಲಿ ತುಮಕೂರು-ಯಶವಂತಪುರ ಮಾರ್ಗದಲ್ಲಿ ಈ ಮೆಮು ರೈಲು ಚಲಿಸಲಿದೆ.

ಯಶವಂತಪುರ – ಹೊಸೂರು ಮೆಮು ರೈಲು ಓಡಾಟಕ್ಕೂ ಅನುಮೋದನೆ 

ಯಶವಂತಪುರ-ಹೊಸೂರು ಮೆಮು ರೈಲು ಓಡಾಟಕ್ಕೂ ಸಹ ರೈಲ್ವೆ ಇಲಾಖೆ ಅನುಮೋದನೆ ನೀಡಿದ್ದು, ಟ್ರೆöÊನ್ ಸಂಖ್ಯೆ ೦೬೨೦೩(೬೬೫೬೩) ಬೆಳಿಗ್ಗೆ ೧೦.೪೫ಕ್ಕೆ ಯಶವಂತಪುರದಿಂದ ಹೊರಟು ಮಧ್ಯಾಹ್ನ ೧೨.೩೦ಕ್ಕೆ ಹೊಸೂರು ತಲುಪಲಿದೆ. ಅದೇ ರೀತಿ ೦೬೨೦೪(೬೬೫೬೪) ಹೊಸೂರು – ಯಶವಂತಪುರ ಮೆಮು ಸಾಯಂಕಾಲ ೩.೨೦ಕ್ಕೆ ಹೊಸೂರಿನಿಂದ ಹೊರಟು ಸಾಯಂಕಾಲ ೫.೧೫ಕ್ಕೆ ಯಶವಶವಂತಪುರ ತಲುಪಲಿದೆ. ಈ ರೈಲು ಮಾರ್ಗ ಮಧ್ಯ ದಲ್ಲಿ ಹೆಬ್ಬಾಳ, ಬಾಣಸವಾಡಿ, ಬೆಳ್ಳಂದೂರು ರಸ್ತೆ, ಕಾರ್ಮೆಲರಾಂ, ಹೀಲಲಿ, ಆನೆಕಲ್ ರಸ್ತೆ ರೈಲ್ವೆ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

 ಕೆಲವೇ ದಿನಗಳಲ್ಲಿ ಈ ಎರಡು ಮಾರ್ಗ ಮಧ್ಯದಲ್ಲಿ ಮೆಮು ರೈಲುಗಳ ಓಡಾಟಕ್ಕೆ ಚಾಲನೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಮತ್ತು ತುಮಕೂರಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ ಮೆಮು ರೈಲುಗಳ ಸೇವೆಯನ್ನು ಒದಗಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಜನತೆಯ ಪರವಾಗಿ ಅಭಿನಂದನೆ ತಿಳಿಸಿದ್ದಾರೆ.