Thursday, 12th December 2024

Tumkur News: ಮಹಾತ್ಮರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಮಾಜಿ ಶಾಸಕ ಗೌರಿಶಂಕರ್

ತುಮಕೂರು: ಭಾರತವನ್ನು ಒಗ್ಗೂಡಿಸಿದ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿ ಕೊಳ್ಳಬೇಕು ಎಂದು ಮಾಜಿ ಶಾಸಕ ಗೌರಿಶಂಕರ್ ತಿಳಿಸಿದರು.

ಗಾಂಧೀಜಿಯವರ ಜನ್ಮದಿನಾಚರಣೆ ಅಂಗವಾಗಿ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಕಾಂಗ್ರೆಸ್ ಕಚೇರಿವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಜಗತ್ತಿನ ಹಲವಾರು ದೇಶಗಳು ಗಾಂಧೀಜಿಯವರ ಆದರ್ಶಗಳನ್ನು ಒಪ್ಪಿ, ಅಳವಡಿಸಿಕೊಂಡಿವೆ. ಇದಕ್ಕೆ ಸಾಕ್ಷಿಯಾಗಿ ಬಹುತೇಕ ಪ್ರಪಂಚದ ಎಲ್ಲ ದೇಶಗಳಲ್ಲಿ ಗಾಂಧೀಜಿ ಅವರ ಪ್ರತಿಮೆಗಳನ್ನು ಕಾಣಬಹುದಾಗಿದೆ. ಆಫ್ರಿಕಾ ದೇಶ ವನ್ನು ಸ್ವತಂತ್ರಗೊಳಿಸುವಲ್ಲಿ ನೆಲ್ಸನ್ ಮಂಡೇಲಾ ಅವರಿಗೆ ಗಾಂಧೀಜಿಯವರ ಆದರ್ಶಗಳೇ ಪ್ರೇರಣೆಯಾಗಿದ್ದವು. ಗಾಂಧಿ ಭಾರತದ ಶಕ್ತಿಯಾಗಿದ್ದರು. ಗಾಂಧೀಜಿಯವರನ್ನು ಪಡೆದ ನಾವೆಲ್ಲ ಅದೃಷ್ಟವಂತರು ಎಂದರು.

ಗಾಂಧೀಜಿ ಅವರು ದಕ್ಷಿಣಾ ಆಫ್ರಿಕಾಕ್ಕೆ ಭೇಟಿ ನೀಡಿದಾಗ ಆಳ್ವಿಕೆ ನಡೆಸುತ್ತಿದ್ದ ಬ್ರಿಟೀಷರು, ವರ್ಣಭೇದ ತಾರತಮ್ಯ ದಿಂದ ಗಾಂಧೀಜಿಯವರನ್ನು ರೈಲಿನಿಂದ ಕೆಳಗೆ ಇಳಿಸಿದ್ದರು. ಅವರು ಅನುಭವಿಸಿದ ಕಷ್ಟವೇ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅಡಿಪಾಯವಾಯಿತು. ಭಾರತಕ್ಕೆ ಆಗಮಿಸಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು ಅಹಿಂಸಾ, ಶಾಂತಿ ಮೂಲಕ ಸ್ವಾತಂತ್ರ್ಯ ತಂದುಕೊಟ್ಟರು. ಮುಂದಿನ ಪೀಳಿಗೆಗು ಗಾಂಧೀಜಿಯವರ ತತ್ವ, ಅದರ್ಶ ಗಳನ್ನು ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.

ಪಾದಯಾತ್ರೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ: Tumkur News: ಸಾಮಾಜಿಕ ಜಾಲತಾಣದ ಬಗ್ಗೆ ಮಹಿಳೆಯರು ಎಚ್ಚರಿಕೆ ವಹಿಸಬೇಕು-ನೂರುನ್ನೀಸಾ