Friday, 20th September 2024

ಚಿರತೆ ದಾಳಿ ಇಬ್ಬರಿಗೆ ಗಾಯ: ಆಸ್ಪತ್ರೆಗೆ ದಾಖಲು

ಮಧುಗಿರಿ: ಚಿರತೆ ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸುವ ಘಟನೆ  ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿ ವೀರಣ್ಣನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಮಕೃಷ್ಣಪ್ಪ ಮತ್ತು ಶಿವಣ್ಣ ರಾತ್ರಿ ಊಟ ಮುಗಿಸಿ ಮನೆಯಿಂದ ಹೊರ ಬಂದಾಗ ಚಿರತೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾಳಿಯ ವೇಳೆ ಕೂಗಿಕೊಂಡಿದ್ದರಿಂದ ಚಿರತೆ ಪರಾರಿಯಾಗಿದ್ದು ಗಾಯಾಳುಗಳನ್ನು ರಕ್ಷಣೆ ಮಾಡಿ, ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಚಿರತೆ ಮನುಷ್ಯರ ಮೇಲೆ ದಾಳಿ ನಡೆಸಿರುವುದು ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕವನ್ನು ಉಂಟು ಮಾಡಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿಯಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.