Saturday, 27th April 2024

ಉಡುಪಿ: ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೋವಿಡ್‌’ಗೆ ಬಲಿ

ಉಡುಪಿ: ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬನವಾಸಿ ಅವರು ಕೋವಿಡ್‌ನಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಮೂಲದವರು, ಕುಟುಂಬದೊಂದಿಗೆ ನಗರದಲ್ಲಿ ವಾಸವಿದ್ದರು‌. ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರರನ್ನು ಅಗಲಿದ್ದಾರೆ. 2020 ರ ನ. 24 ರಂದು ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದರು.

ಪಡುಬಿದ್ರೆ ಬೀಚ್ ಬ್ಲೂ ಪ್ಲಾಗ್ ಅಂತರರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಶ್ರಮಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋ ದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸೇವಾ ಮುಂಬಡ್ತಿ ಹೊಂದಿದ್ದರು. ಸರ್ಕಾರಿ ಕೆಲಸಕ್ಕೆ ಸೇರುವ ಮುನ್ನ ಪತ್ರಕರ್ತರಾಗಿ ಕೆಲಸ ಮಾಡಿದ್ದರು.

 

Leave a Reply

Your email address will not be published. Required fields are marked *

error: Content is protected !!