Thursday, 12th December 2024

ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ನೇಮಕ

ಡುಪಿ: ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಅನುಭವವಿದ್ದ ಡಾ.ವಿದ್ಯಾ ಕುಮಾರಿ ಅವರನ್ನು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿಕಟಪೂರ್ವ ಜಿಲ್ಲಾಧಿಕಾರಿಯಾಗಿದ್ದ ಕೂರ್ಮರಾವ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದ್ದು, ಮುಂದಿನ ಹುದ್ದೆಗೆ ನಿಯುಕ್ತಿಗೊಳಿಸಿಲ್ಲ. ಡಾ.ವಿದ್ಯಾಕುಮಾರಿ ಅವರು ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕ ಗೊಂಡಿದ್ದಾರೆ.

ಡಾ.ವಿದ್ಯಾಕುಮಾರಿ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರು. 2014ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ವಿದ್ಯಾಕುಮಾರಿ ಆಗಿದ್ದಾರೆ. ಈ ಹಿಂದೆ ಕೂರ್ಮರಾವ್ ಅವರು 2021ರ ಅಗಸ್ಟ್ 29ರಂದು ಉಡುಪಿ ಜಿಲ್ಲಾ ಧಿಕಾರಿ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರು ಲಕ್ಷ್ಮೀ ಹೆಬ್ಬಾಳ್ಕರ್ ಅವರಾಗಿದ್ದು, ಇದೀಗ ಮಹಿಳಾ ಅಧಿಕಾರಿಯನ್ನೇ ಜಿಲ್ಲಾಧಿಕಾರಿ ಯನ್ನಾಗಿ ಸರ್ಕಾರ ನೇಮಕ ಮಾಡಿದ್ದು, ಉಡುಪಿಯಲ್ಲಿ ಆಡಳಿತ ವ್ಯವಸ್ಥೆಗೆ ಮಹಿಳಾ ಬಲ ಬಂದಂತಾಗಿದೆ.