Saturday, 7th September 2024

ಮೋದಿ ಪದಗ್ರಹಣ: ಪೇಜಾವರಶ್ರೀಗಳಿಗೂ ಆಹ್ವಾನ

ಉಡುಪಿ: ನರೇಂದ್ರ ಮೋದಿಯವರ ಮೂರನೇ ಬಾರಿಯ ಪಟ್ಟಾಭಿಷೇಕಕ್ಕೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ಧೂರಿ ಸಮಾರಂಭ ನಡೆಯಲಿದ್ದು, ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.

ಪ್ರಧಾನಿಯಾಗಿ ನರೇಂದ್ರ ಮೋದಿ ಪದಗ್ರಹಣ ಮಾಡಲಿದ್ದಾರೆ. ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಪೇಜಾವರಶ್ರೀಗಳಿಗೂ ಆಹ್ವಾನ ಸಿಕ್ಕಿದ್ದು ಕೆಂಪೇಗೌಡ ಏರ್​ಪೋರ್ಟ್​ನಿಂದ ದೆಹಲಿಗೆ ಶ್ರೀಗಳು ತೆರಳಲಿದ್ದಾರೆ.

ತಡರಾತ್ರಿ ಪ್ರಧಾನಮಂತ್ರಿ ಕಚೇರಿಯಿಂದ ಕರೆ ಮಾಡಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗೆ ಆಹ್ವಾನ ಮಾಡಲಾಗಿದೆ. ಹೀಗಾಗಿ ಕೆಂಪೇಗೌಡ ಏರ್​ಪೋರ್ಟ್​ನಿಂದ ದೆಹಲಿಗೆ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೆರಳಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ದಾವಣಗೆರೆಯ ಸಮಾಜ ಸೇವಕ & ಬಿಜೆಪಿ ಮುಖಂಡ ಡಾ.ನಸೀರ್ ಅಹ್ಮದ್​ ಅವರಿಗೂ ಪಿಎಂಒ ಅಧಿಕೃತ ಆಹ್ವಾನ ನೀಡಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯ, ಬಿಜೆಪಿ ಕಚೇರಿಯಿಂದ ದೂರವಾಣಿ ಕರೆ ಮಾಡಿ ಅಧಿಕೃತ ಆಹ್ವಾನ ನೀಡಲಾಗಿದೆ. ರಾಜ್ಯ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯರಾಗಿರುವ ಡಾ.ನಸೀರ್ ಹುಬ್ಬಳ್ಳಿ ಏರ್​ಪೋರ್ಟ್​ನಿಂದ ದೆಹಲಿಗೆ ತೆರಳಲಿದ್ದಾರೆ.

ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಖರ್ಗೆಗೆ ಆಹ್ವಾನ

ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕಾರ್ಯಕ್ರಮಕ್ಕೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಆಹ್ವಾನ ನೀಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಆಹ್ವಾನ ಸ್ವೀಕರಿಸಿದ್ದಾರೆ. ಆದರೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗಬೇಕೋ ಬೇಡವೋ ಎಂದು ಇನ್ನೂ ನಿರ್ಧರಿಸಿಲ್ಲ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!