Thursday, 28th November 2024

ವಿವಿ ವ್ಯಾಪ್ತಿಯ ಹಾಸ್ಟೆಲ್ ಸಮಸ್ಯೆ ಬಗೆಹರಿಸಲು ಕುಲಪತಿಗೆ ಮನವಿ

ತುಮಕೂರು: ತುಮಕೂರು ವಿವಿ ವ್ಯಾಪ್ತಿಗೆ ಒಳಪಡುವ ಕಾಲೇಜುಗಳಲ್ಲಿ ಹಾಗೂ ಹಾಸ್ಟೆಲ್‌ಗಳಲ್ಲಿನ ಸಮಸ್ಯೆಗಳನ್ನು ಬಗೆಹರಿ ಸುವ ಕುರಿತಂತೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಮುರಳೀಧರ ಹಾಲಪ್ಪ ತುಮಕೂರು ವಿವಿ ಕುಲಪತಿಗಳೊಂದಿಗೆ ಚರ್ಚೆ ನಡೆಸಿದರು.

ನಗರದ ತುಮಕೂರು ವಿವಿ ಕುಲಪತಿಗಳ ಕಚೇರಿಗೆ ನಿಯೋಗದಲ್ಲಿ ತೆರಳಿದ ಮುರಳೀಧರ ಹಾಲಪ್ಪ ಅವರು, ವಿವಿ ವ್ಯಾಪ್ತಿಗೆ ಒಳಪಡುವ ಕಾಲೇಜು ಹಾಗೂ ಹಾಸ್ಟೆಲ್‌ಗಳಲ್ಲಿ ಹಲವಾರು ಸಮಸ್ಯೆಗಳಿದ್ದು, ಅವುಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ವಿಶ್ವವಿದ್ಯಾಲಯ ಹಾಗೂ ಪ್ರಥಮ ದರ್ಜೆ ಕಾಲೇಜುಗಳನ್ನು ಪುನರುತ್ಥಾನಗೊಳಿಸು ವುದು, ವಿಶ್ವವಿದ್ಯಾಲಯದಲ್ಲಿ ಕ್ರೀಡಾಪಟು ಗಳ ಶೈಕ್ಷಣಿಕ ಹಾಗೂ ಕ್ರೀಡೆಯ ಖರ್ಚು ಭರಿಸಿ ದತ್ತು ಪಡೆಯುವ ಪದ್ಧತಿ ಆರಂಭಿಸಬೇಕು. ಪ್ರತಿಭೆಗಳನ್ನು ಗುರುತಿಸಿ ಸಾಧಕರಿಗೆ ಅನುದಾನ, ಹುದ್ದೆಗಳಂತಹ ಹೆಚ್ಚಿನ ಮಟ್ಟದಲ್ಲಿ ಪ್ರೋತ್ಸಾಹ ನೀಡಬೇಕು, ವಿಶ್ವವಿದ್ಯಾ ಲಯ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಕ್ರೀಡಾ ಬೋಧಕರ ಹಾಗೂ ಇತರೆ ಹುದ್ದೆಗಳ ನೇಮಕಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಡಾ.ಜಿ. ಪರಮೇಶ್ವರ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗ 2004ರಲ್ಲಿ ರಾಜ್ಯದ ಮೊದಲ ಜಿಲ್ಲಾ ಮಟ್ಟದ ವಿಶ್ವವಿದ್ಯಾಲಯ ವಾಗಿ ತುಮಕೂರು ವಿಶ್ವವಿದ್ಯಾಲಯವನ್ನು ಅಸ್ಥಿತ್ವಕ್ಕೆ ತರಲಾಯಿತು. ಆದರೆ ವಿಶ್ವವಿದ್ಯಾಲಯಕ್ಕೆ ಪ್ರತ್ಯೇಕ ಕ್ಯಾಂಪಸ್ ನಿರ್ಮಾಣ ಮಾತ್ರ 18 ವರ್ಷ ಪೂರೈಸುತ್ತಾ ಬಂದರೂ ಪೂರ್ಣಗೊಂಡಿಲ್ಲ. ನಾಗವಲ್ಲಿ ಬಳಿ ಬಿದರೆಕಟ್ಟೆ ಕಾವಲ್ ನಲ್ಲಿ 240.10 ಎಕರೆ ವಿಶ್ವವಿದ್ಯಾಲಯ ಕ್ಯಾಂಪಸ್‌ಗೆ ಜಾಗ ಮಂಜೂರು ಮಾಡಲಾಯಿತು.

2016ರಲ್ಲಿ ಕ್ಯಾಂಪಸ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು ಜೊತೆಗೆ ಬಜೆಟ್ ನಲ್ಲಿ 40 ಕೋಟಿ ಅನುದಾನವನ್ನು ಘೋಷಿಸಲಾಯಿತು. ಅಕಾಡೆಮಿಕ್ ಬ್ಲಾಕ್‌ಗೆ ಅವಶ್ಯಕವಾಗಿರುವ ಕಲಾಭವನ, ಕರ್ನಾಟಕ ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಕೇಂದ್ರ ಹಾಗೂ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕಿದೆ ಹಾಗೂ ಪಿಜಿ ಕೋರ್ಸಿನ ಸ್ಥಳಾಂತರವು ಅತ್ಯವಶ್ಯಕವಾಗಿದೆ ಎಂದರು.

ಮನವಿಯನ್ನು ಆಲಿಸಿದ ತುಮಕೂರು ವಿವಿ ಕುಲಪತಿ ಪ್ರೊ.ವೆಂಕಟೇಶ್ವರಲು, ಎಸ್‌ಸಿಪಿ/ಟಿಎಸ್‌ಪಿ ಅನುದಾನದಡಿಯಲ್ಲಿ ಹಾಸ್ಟೆಲ್‌ಗಳ ದುರಸ್ಥಿ ಕಾರ್ಯ ನಡೆಯುತ್ತಿದೆ ಎಂದರು.

ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಕ್ರೀಡಾ ಉತ್ತೇಜನಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸುಮಾರು 1.30 ಕೋಟಿ ರೂ.ವೆಚ್ಚದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ನವೆಂಬರ್‌ನಲ್ಲಿ ತುಮಕೂರು ವಿವಿ ನೂತನ ಕ್ಯಾಂಪಸ್‌ನಲ್ಲಿ ಕಲ್ಪತರು ಉತ್ಸವ ಏರ್ಪಡಿಸಿ, ಅಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿ ಸುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಸೌತ್ ಜೋನ್‌ಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮರಿಚನ್ನಮ್ಮ, ಸಂಜೀವ್‌ಕುಮಾರ್, ನಟರಾಜಶೆಟ್ಟಿ, ಬ್ರಹ್ಮಾನಂದರೆಡ್ಡಿ, ಆದಿಲ್ ಖಾನ್, ದಿಲೀಪ್, ದೀಪಿಕಾ, ಯಶೋಧಮ್ಮ, ಕಿರಣ್, ಜಿಲ್ಲಾ ಸೇವಾದಳ ಅಧ್ಯಕ್ಷ ಶಿವಪ್ರಸಾದ್, ರಹೀಮ್, ಅದೀಲ್‌ಖಾನ್, ಎನ್‌ಎಸ್‌ ಯುಐನ ಹೇಮಂತ್, ಆಕಾಶ್, ಬೈರೇಶ್, ತರುಣ್ ಮುಂತಾದವರು ಭಾಗವಹಿಸಿದ್ದರು.