ಕಾರವಾರ: ಬೆಂಗಳೂರಿನಿಂದ ತೀರ್ಥಕ್ಷೇತ್ರ ಪ್ರವಾಸಕ್ಕೆ ಬಂದಿದ್ದ ಕಾಲೇಜು ವಿದ್ಯಾರ್ಥಿಗಳಲ್ಲಿ (College students) ಒಬ್ಬ ಮುರ್ಡೇಶ್ವರದಲ್ಲಿ (Murdeshwar) ಸಮುದ್ರಕ್ಕೆ ಇಳಿದವನು ಮುಳುಗಿ (Drowned) ಜೀವಬಿಟ್ಟಿದ್ದಾನೆ. ಇನ್ನೊಬ್ಬನನ್ನು ರಕ್ಷಿಸಲಾಗಿದೆ.
ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ದುರ್ಘಟನೆ ನಡೆದಿದೆ. ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ. ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು.
ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳುಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನು ಧನುಷ್ ಹೇಳಿರಲಿಲ್ಲ. ಈ ಮಾಹಿತಿ ತಿಳಿಯದೇ ಒಬ್ಬನನ್ನು ಮಾತ್ರ ರಕ್ಷಣೆ ಮಾಡಲು ಸಾಧ್ಯವಾಯಿತು. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಫ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ್ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ. ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mumtaz Ali Missing: ಮುಮ್ತಾಜ್ ಅಲಿ ಪತ್ತೆಗಿಳಿದ ಈಶ್ವರ ಮಲ್ಪೆ ತಂಡ; ಮಹಿಳೆಯ ಬ್ಲ್ಯಾಕ್ಮೇಲ್ ಕಾರಣ?
ಮಂಗಳೂರು: ಕೂಳೂರು ಸೇತುವೆ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿರುವ ಉದ್ಯಮಿ, ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸೋದರ ಮುಮ್ತಾಜ್ ಆಲಿಯವರಿಗಾಗಿ ಹುಡುಕಾಟ ಮುಂದುವರೆದಿದೆ. ಮಹಿಳೆಯೊಬ್ಬರು ಇವರನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದು, ಆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬುದು ಎಂದು ಶಂಕಿಸಲಾಗಿದೆ.
ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೂಳೂರು ಸೇತುವೆ ಬಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಮುಳುಗುತಜ್ಞ ಈಶ್ಚರ ಮಲ್ಪೆ ತಂಡ ಸಹಿತ ಹಲವು ರಕ್ಷಣಾ ತಂಡಗಳು ಶೋಧ ಕಾರ್ಯದಲ್ಲಿ ನಿರತವಾಗಿವೆ. ಮಾಜಿ ಶಾಸಕ ಮೊಯ್ದಿನ್ ಬಾವಾ ಕೂಡ ಸ್ಥಳದಲ್ಲಿದ್ದು ಕಾರ್ಯಾಚರಣೆ ಪರಿಶೀಲಿಸಿದರು.
ಒಂದು ಹಂತದ ಹುಡುಕಾಟದ ನಡೆಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ನಾವು ಏಳು ಜನ ಆಳಕ್ಕೆ ಮುಳುಗಿ ಕಾರ್ಯಾಚರಣೆ ನಡೆಸಿದ್ದೇವೆ, ಆದರೆ ಎಲ್ಲೂ ಕೂಡ ಪತ್ತೆಯಾಗಿಲ್ಲ ಎಂದರು. ಸದ್ಯಕ್ಕೆ 100 ಮೀಟರ್ ಸುತ್ತುತ್ತಾ ಹುಡುಕಾಟ ನಡೆಸಲಾಗಿದೆ. ಸೇತುವೆ ಆಳಕ್ಕೆ ಇಳಿದು ಹುಡುಕಾಟ ನಡೆಸಿದ್ದೇವೆ. ಸೇತುವೆ ಕಾಮಗಾರಿ ನಡೆಯುತ್ತಿದ್ದು ಕೆಳಗೆ ಕಬ್ಬಿಣದ ಸರಳು, ಸಿಮೆಂಟ್ ಚೀಲಗಳಿವೆ. ಕೆಳಗೆ ಕತ್ತಲೆ ಇರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಹೇಳಿದರು.
ಎಲ್ಲಾ ತಂಡಗಳು ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸುತ್ತೇವೆ. ಅವರು ಜೀವಂತವಾಗಿ ಇರಲಿ ಎಂದು ಆಶಿಸುತ್ತೇವೆ ಎಂದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಲಿ ಅವರ ಸಹೋದರ ಬಿ.ಎಂ ಫಾರೂಕ್, ಐವನ್ ಡಿಸೋಜ ಭೇಟಿ ನೀಡಿದ್ದಾರೆ.
ಮಹಿಳೆಯೊಬ್ಬರು ಮುಮ್ತಾಜ್ ಅಲಿಗೆ ನಿರಂತರವಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಮದುವೆ ಆಗುವಂತೆ ಮುಮ್ತಾಜ್ಗೆ ಮಹಿಳೆ ಪೀಡಿಸುತ್ತಿದ್ದಳು ಎಂಬ ದೂರು ಕೇಳಿಬಂದಿದೆ. ಮಹಿಳೆಯ ಬ್ಲ್ಯಾಕ್ಮೇಲ್ಗೆ ಸುರತ್ಕಲ್ನ ನಾಲ್ವರು ಸಹಕಾರ ಕೊಟ್ಟಿದ್ದಾರೆ. ಮಸೀದಿ ಕಮಿಟಿ ವಿಚಾರದಲ್ಲಿ ಮುಮ್ತಾಜ್ ನಾಲ್ವರ ಜೊತೆ ಜಗಳ ಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮುಮ್ತಾಜ್ ಅಲಿ ಮನೆಯಿಂದ ಹೊರಟಿದ್ದರು. ಬಳಿಕ 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಮೇಲೆ ಮುಮ್ತಾಜ್ ಬಿಎಂಡಬ್ಲ್ಯು ಕಾರು ದೊರೆತಿದೆ. ಅವರ ಪುತ್ರಿಗೆ ಈ ವಿಚಾರ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರಿಗೆ ಸಣ್ಣದೊಂದು ಅಪಘಾತ ಆದಂತೆ ಕಾಣಿಸುತ್ತಿದೆ. ಮುಮ್ತಾಜ್ ಅಲಿ ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: Children Drowned: ಪುಣ್ಯಸ್ನಾನಕ್ಕೆ ತೆರಳಿದ್ದ ಎಂಟು ಮಕ್ಕಳು ಕೊಳದಲ್ಲಿ ಮುಳುಗಿ ದಾರುಣ ಸಾವು