Wednesday, 11th December 2024

ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ: ಸಿಬಿಐನಿಂದ ಎಫ್‌ಐಆರ್

ಬೆಂಗಳೂರು: ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದಲ್ಲಿ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಸಚಿವರೊಬ್ಬರ ಆಪ್ತನನ್ನು ಎಸ್‌ಐಟಿ ನಿನ್ನೆ ವಶಕ್ಕೆ ಪಡೆದುಕೊಂಡಿದೆ.ನೆಕ್ಕುಂಟಿ ನಾಗರಾಜ್ ಎಂಬುವರನ್ನು ಎಸ್‌ಐಟಿ ವಶಕ್ಕೆ ಪಡೆದುಕೊಂಡಿದೆ. ಈತನೇ ವಾಲ್ಮೀಕಿ ನಿಗಮದ ಅಧಿಕಾರಿಗಳ ಮೇಲೆ ಒತ್ತಡ ಹೇರಿ ನಿಗಮದ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ.