Sunday, 15th December 2024

ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಮತ್ತೊಮ್ಮೆ ಕಲ್ಲೆಸೆತ

ಚಿಕ್ಕಮಗಳೂರು: ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಕಿಡಿಗೇಡಿಗಳು ಮತ್ತೊಮ್ಮೆ ಕಲ್ಲು ಎಸೆದಿದ್ದಾರೆ. ಚಿಕ್ಕಮಗಳೂರಿನ ಅರಸೀಕೆರೆ ಹಾಗೂ ಬೀರೂರು ಮಧ್ಯೆ ಸಂಚರಿಸುತ್ತಿದ್ದ ವೇಳೆ ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಬೆಳಗ್ಗೆ ಘಟನೆ ನಡೆದಿದ್ದು, ಅರಸೀಕೆರೆ-ಬೀರೂರು ಮಾರ್ಗದಲ್ಲಿರುವ ಸ್ಲಂ ಹುಡುಗರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಕಲ್ಲು ಹೊಡೆದಿದ್ದಾರೆಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನ ಗಾಜಿಗೆ ಹಾನಿಯಾಗಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ.

ಕಳೆದ ಐದು ದಿನಗಳ ಅಂತರದಲ್ಲಿ ರೈಲಿಗೆ ಕಲ್ಲು ಎಸೆದಿರುವುದು ಎರಡನೇ ಘಟನೆ ಯಾಗಿದೆ. ಜುಲೈ 01ರಂದು ಮಧ್ಯಾಹ್ನ 3-30ಕ್ಕೆ ಧಾರವಾಡದಿಂದ ದಾವಣಗೆರೆಗೆ ಸಂಚರಿಸುತ್ತಿದ್ದ ವೇಳೆ ರೈಲಿಗೆ ಕಲ್ಲು ಎಸೆಯಲಾಗಿತ್ತು. ಈ ಪ್ರಕರಣ ಸಂಬಂಧ ದಾವಣ ಗೆರೆಯ ಆಜಾದ್ ನಗರ ಹಾಗೂ ಬಾಷಾ ನಗರದ 12 ವರ್ಷದ ಇಬ್ಬರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಚಿತ್ರದುರ್ಗದ ರಿಮ್ಯಾಂಡ್ ಹೋಂಗೆ ಕಳುಹಿಸ ಲಾಗಿದೆ.