Saturday, 27th July 2024

ವರ್ತೂರ್ ಅಪಹರಣ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸ ಲಾಗಿದೆ. ಇದುವರೆಗೂ 6 ಆರೋಪಿಗಳನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪಹರಣ ಪ್ರಕರಣ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ ಆರೋಪಿ ರೋಹಿತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಎ1 ಆಗಿದ್ದಾನೆ. ತಮಿಳುನಾಡಿನ ಹೊಸೂರಿನಿಂದ ಆರೋಪಿ ತಪ್ಪಿಸಿಕೊಂಡಿದ್ದ.

ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಬೆಂಗಳೂರು ನಗರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ರೋಹಿತ್‌ನನ್ನು ಬಂಧಿಸಿ ದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆದಿದೆ.

2020ರ ನವೆಂಬರ್ 26ರಂದು ಕೋಲಾರದ ಬೆಗ್ಲಿಹೊಸಹಳ್ಳಿ ತೋಟದ ಮನೆಯ ಬಳಿಯಿಂದ ವರ್ತೂರು ಪ್ರಕಾಶ್‌ ಅಪಹರಣ ಮಾಡಲಾಗಿತ್ತು. ಡಿಸೆಂಬರ್ 3ರಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಕವಿರಾಜ್, ಲಿಖಿತ್, ಮನೋಜ್, ರಾಘವೇಂದ್ರ, ಪ್ರವೀಣ್ ಬಂಧನ ವಾಗಿದೆ. ಬೆಂಗಳೂರು, ತಮಿಳುನಾಡು ಸೇರಿದಂತೆ ವಿವಿಧ ಕಡೆ ಕವಿರಾಜ್ ವಿರುದ್ಧ 10 ಅಪಹರಣ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *

error: Content is protected !!