ಚಿಕ್ಕಬಳ್ಳಾಪುರ: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.
ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದರು.
ಕೇವಲ ರಾಜಕಾರಣಿಯಾಗದ ವೀರಪ್ಪ ಮೊಯ್ಲಿ, ಸಾಹಿತಿ ಕೂಡ ಆಗಿದ್ದಾರೆ. ಅವರ ಹೆಂಡತಿ ಮಾಲತಿ ಮೊಯ್ಲಿ ಸಹ ಲೇಖಕಿ ಯಾಗಿದ್ದಾರೆ.
ವೀರಪ್ಪ ಮೊಯ್ಲಿ ಅವರು ಸುಳಿಗಾಳಿ, ಸಾಗರದೀಪ, ಕೊಟ್ಟ, ತೆಂಬರೆ ಸೇರಿದಂತೆ ವಿವಿಧ ಕಾದಂಬರಿಗಳನ್ನು ಬರೆದಿದ್ದಾರೆ. ಇದಲ್ಲದೇ ನಾಟಕ, ಕವನ ಸಂಕಲನ, ಮಹಾಕಾವ್ಯಗಳನ್ನು ಬರೆದಿದ್ದಾರೆ.