Tuesday, 26th November 2024

ಸೆ.20ಕ್ಕೆ ವೀರಶೈವ ಪುರೋಹಿತ ಮಹಾಸಭಾ ಜಿಲ್ಲಾ ಶಾಖೆ ಉದ್ಘಾಟನೆ

ತುಮಕೂರು: ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ ತುಮಕೂರು ಜಿಲ್ಲಾ ಘಟಕದ ಉದ್ಘಾಟನೆ, ಶ್ರೀ ವೀರಭದ್ರ ಸ್ವಾಮಿ ಜಯಂತೋತ್ಸವ ಸೆ.20ರಂದು ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯ ದರ್ಶಿ ಕೆ.ಎಸ್.ವೀರಪ್ಪದೇವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೆ.20ರ ಬೆಳಗ್ಗೆ 8 ಗಂಟೆ ನಗರದ ಟೌನ್‌ಹಾಲ್ ವೃತ್ತದಿಂದ ಶ್ರೀ ವೀರಭದ್ರಸ್ವಾಮಿ ಮೂರ್ತಿ ಯನ್ನು ಬೆಳ್ಳಿ ಸಾರೋಟಿನಲ್ಲಿ ಇಟ್ಟು, ಅಶೋಕ ರಸ್ತೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ರಸ್ತೆ ಮೂಲಕ ಜೆ.ಸಿ.ರಸ್ತೆಯಲ್ಲಿರುವ ವೀರಶೈವ ಕಲ್ಯಾಣ ಮಂಟದವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ, ಯಡಿ ಯೂರಿನ ಶ್ರೀ ರೇಣುಕ ಶಿವಾಚಾರ್ಯ ಮಹಾಸ್ವಾಮೀಜಿ, ಹಿರೇಮಠದ ಡಾ.ಶ್ರೀ ಶಿವಾನಂದ ಶಿವಾಚಾರ್ಯಸ್ವಾಮೀಜಿ, ದೊಡ್ಡಗುಣಿಯ ಶ್ರೀರೇವಣ್ಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿದ್ದರಬೆಟ್ಟದ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿ, ಹಾಗೂ ತೆವಡೇ ಹಳ್ಳಿಯ ಶ್ರೀ ಚನ್ನಬಸವೇಶ್ವರ ಮಹಾಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ಶ್ರೀ ಚನ್ನೇಶ ಶಾಸ್ತ್ರಿ ವಹಿಸಲಿದ್ದಾರೆ.
ಪ್ರಾಸ್ತಾವಿಕ ನುಡಿಗಳನ್ನು ದೇವರಾಜ ಶಾಸ್ತ್ರಿ ನುಡಿಯಲಿದ್ದು, ಅಖಿಲ ಕರ್ನಾಟಕ ವೀರಶೈವ ಪುರೋಹಿತರ ಮಹಾಸಭಾ ತುಮ ಕೂರು ಜಿಲ್ಲಾಶಾಖೆಯನ್ನು ಸಂಸದ ಜಿ.ಎಸ್.ಬಸವರಾಜು ಉದ್ಘಾಟಿಸುವರು. ಪ್ರತಿಜ್ಞಾ ವಿಧಿಯನ್ನು ರಾಜ್ಯ ಪ್ರಧಾನ ಕಾರ್ಯ ದರ್ಶಿ ಕೆ.ಎಸ್.ವೀರಪ್ಪದೇವರು ಬೋಧಿಸಲಿದ್ದು, ಜಿಲ್ಲಾ ಸಂಘ ಬೆಳೆದು ಬಂದ ಹಾದಿ ಕುರಿತು ಅಕವೀಪು ಮಹಾಸಭಾದ ಜಿಲ್ಲಾಧ್ಯಕ್ಷ ರುದ್ರೇಶ್ ಶಾಸ್ತಿçಗಳು ವಿವರ ನೀಡುವರು ಎಂದರು.
ಜಿಲ್ಲೆಯ ಎಲ್ಲಾ ಸಚಿವರು, ಶಾಸಕರು, ಮಾಜಿ ಶಾಸಕರು, ಜಿ.ಪಂ., ತಾ.ಪಂ. ಸದಸ್ಯರು, ಮಹಾನಗರಪಾಲಿಕೆ ಕೌನ್ಸಿರ‍್ಸ್ಗಳು ಹಾಗೂ ಮುಖಂಡರು ಉಪಸ್ಥಿತರಿರುವರು. ಇದೇ ವೇಳೆ ಕಳೆದ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವೀರಶೈವ ಪುರೋಹಿತರ ಮಕ್ಕಳಿಗೆ ಪ್ರತಿಭಾಪುರಸ್ಕಾರ ನೆರವೇರಿಸಲಾಗುವುದು.
ಅಸಂಘಟಿತರಾಗಿರುವ ವೀರಶೈವ ಪುರೋಹಿತರನ್ನು ಒಗ್ಗೂಡಿಸಿ, ಸರಕಾರದ ಸವಲತ್ತುಗಳನ್ನ ಪಡೆಯುವ ನಿಟ್ಟಿನಲ್ಲಿ ಹಲವು ಮನವಿಗಳನ್ನು ಇದೇ ಸಂದರ್ಭದಲ್ಲಿ ಮಂಡಿಸಲಾಗುವುದು ಎಂದರು. ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರೇಶ್, ನಿರ್ದೇಶಕರು ಇದ್ದರು.