Thursday, 12th December 2024

ಚಿತ್ರದುರ್ಗಕ್ಕೆ ನೂತನ ಜಿಲ್ಲಾಧಿಕಾರಿ ವೆಂಕಟೇಶ್.ಟಿ. ನೇಮಕ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ.ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಇವರ ಜಾಗಕ್ಕೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ಆದೇಶ ನೀಡಿದ್ದಾರೆ.
2015ರ ಐಎಎಸ್ ಅಧಿಕಾರಿ ವೆಂಕಟೇಶ್.ಟಿ.ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. 2014 ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ದಿವ್ಯ ಪ್ರಭು ಅವರು ಅಕ್ಟೋಬರ್ 23, 2022ರಂದು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ‌ ಅಧಿಕಾರ ಸ್ವೀಕರಿಸಿದ್ದರು.