Monday, 20th May 2024

ಶಾಲೆಗಳನ್ನು ತೆರೆಯುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರ ಮಾತು

ಮಡಿಕೇರಿ: ಶಾಲೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರಕಾರ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದೆ. ಗೊಂದಲ ರಹಿತ ನಿರ್ಧಾರ ಕೈಗೊಳ್ಳಲು ಸರಕಾರ ಮುಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಸಲಹೆ ನೀಡಿದ್ದಾರೆ.

ಮಡಿಕೇರಿಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ನ 30 ನೇ ವಾರ್ಷಿಕೋತ್ಸವ ಕಾರ್ಯಕ್ರಮ. ಸಂದರ್ಭ ಸುದ್ದಿಗಾರರೊಂದಿಗೆ ವಿಶ್ವನಾಥ್ ಮಾತನಾಡಿದರು.

ಶಾಲೆಗಳಿಗೆ ಮಕ್ಕಳನ್ನು ಕಳುಹಿಸ ಬೇಕೇ ಬೇಡವೇ ಎನ್ನುವ ನಿರ್ಧಾರವನ್ನು ಪೋಷಕರು ತೆಗೆದುಕೊಳ್ಳ ಬೇಕೇ ವಿನಾ ಸರ್ಕಾರ ಅಲ್ಲ. ಕಳೆದ ಹಲವು ದಿನಗಳಿಂದ ಸರಕಾರ ಈ ಬಗ್ಗೆ ಸಾಕಷ್ಟು ಗೊಂದಲ ಉಂಟು ಮಾಡಿದೆ. ಹಲವು ಬಾರಿ ವಿಭಿನ್ನ ನಿರ್ಧಾರ ಕೈಗೊಂಡಿದೆ.. ಇಂದಿಗೂ ಒಂದು ಸ್ಪಷ್ಟ ನಿರ್ಧಾರ ಕೈಗೊಳ್ಳುವಲ್ಲಿ ಸರ್ಕಾರಕ್ಕೆ ಸಾದ್ಯ ಆಗಿಲ್ಲ.
ಇದರಿಂದ ರಾಜ್ಯದ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ ಎಂದೂ ವಿಶ್ವನಾಥ್ ಹೇಳಿದರು.
ಸಂಸದ ಶ್ರೀನಿವಾಸ್ ಪ್ರಸಾದ್ ತಮ್ಮನ್ನು ಮುಖ್ಯ ಮಂತ್ರಿ ಕಡೆಗಾನಿಸಿದ್ದಾರೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ವಿಶ್ವನಾಥ್ ಕೆಲವರಿಗೆ ಅಸಮಾಧಾನ ಆಗಿರಬಹುದು. ಇದನ್ನು ಮಾತುಕತೆ ಮೂಲಕ ಸರಿಪಡಿಸಬೇಕು ಎಂದು ವಿಶ್ವನಾಥ್ ಹೇಳಿದರು

Leave a Reply

Your email address will not be published. Required fields are marked *

error: Content is protected !!