Thursday, 21st November 2024

ಎಲ್ಲಾ ಕ್ರೆಟರಿಯಾ ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ: ಬೊಮ್ಮಾಯಿ

ವಿಜಯಪುರ: ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುತ್ತೆ, ಎಲ್ರಿಗೂ ಹಂಡ್ರೆಡ್ ಪರ್ಸೆಂಟ್ ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ, ಸರ್ವೇ, ಪರ್ಪಾರ್ಮೆನ್ಸ್ ಸೇರಿ ಎಲ್ಲಾ ಕ್ರೆಟರಿಯಾ ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ ಎನ್ನುವ ಮೂಲಕ ಕೆಲವರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಬೊಮ್ಮಾಯಿ ಸಹಮತ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಡಿಯೂರಪ್ಪನವರು ಸಂಸದೀಯ ಮಂಡಳಿ ಸದಸ್ಯರು, ಅವರಿಗೆ ಮಾಹಿತಿ ಇರಬಹುದು, 70 ವಯಸ್ಸು ದಾಟಿದವರಿಗೆ ಟೀಕೆಟ್ ನೀಡಬೇಕೇ, ಬೇಡವೇ ಎನ್ನುವ ವಿಚಾರ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿಯೊಂದು ಕ್ಷೇತ್ರದ ಕುರಿತು ಸಂಸದೀಯ ಮಂಡಳಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದರು. ಆದರೆ ನೂರಕ್ಕೆ ನೂರ ರಷ್ಟು ಎಲ್ಲರಿಗೂ ಟಿಕೆಟ್ ಸಿಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯಪುರದ ಚಿಕ್ಕಗಲಗಲಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ವಿಚಾರದಲ್ಲಿ ತನಿಖೆ ನಡೆಸಲು ಲೋಕಾ ಯುಕ್ತರು ಸರ್ವಸ್ವತಂತ್ರರು, ನ್ಯಾಯಾಲಯ ತೀರ್ಮಾನಕ್ಕೆ ನಾವೆಲ್ಲಾ ತಲೆ ಬಾಗಬೇಕಾಗುತ್ತದೆ, ಇದರ ನಂತರ ಲೋಕಾಯುಕ್ತರು ಮುಂದಿನ ತನಿಖೆ ನಡೆಸಿದ್ದಾರೆ. ಇದರಲ್ಲಿ ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಸುಖಾಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದೆ, ಈ ಥರ ಆಪಾದನೆ ಮಾಡೋ ಮೂಲಕ ಅವರು ಮಾಡಿರೋ ಭ್ರಷ್ಟಾಚಾರ ತೊಳೆದು ಹೋಗೋಲ್ಲ, ಅವರ ಕರ್ಮ, ಪಾಪ ತೊಳೆದು ಹೋಗೋಲ್ಲ ಅದು ಮತ್ತೆ ಬಂದೆ ಬರುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಇದೆ ವೇಳೆ ಮಾಡಾಳ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ತೀಕ್ಷ್ಣವಾಗಿ ಪ್ರತಿಕ್ರಿಯಿ ಸಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಪ್ರಕರಣದ ವಿಚಾರದಲ್ಲಿ ತನಿಖೆ ನಡೆಸಲು ಲೋಕಾಯುಕ್ತರು ಸರ್ವಸ್ವತಂತ್ರರು, ನ್ಯಾಯಾಲಯ ತೀರ್ಮಾನಕ್ಕೆ ನಾವೆಲ್ಲಾ ತಲೆ ಬಾಗಬೇಕಾಗುತ್ತದೆ, ಇದರ ನಂತರ ಲೋಕಾಯುಕ್ತರು ಮುಂದಿನ ತನಿಖೆ ನಡೆಸಿದ್ದಾರೆ. ಇದರಲ್ಲಿ ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

59 ಪ್ರಕರಣಗಳನ್ನು ಎಸಿಬಿಗೆ ಕೊಟ್ಟದ್ದು, ಲೋಕಾಯುಜಠಕ್ಕೆ ಕೊಡುತ್ತೇವೆ. ಅಲ್ಲಿ ಕಾಂಗ್ರೆಸ್ ಬಣ್ಣ ಬಹಳಷ್ಟು ಬಯಲಾಗುತ್ತದೆ ಎಂದರು. ಇದೇವೇಳೆ ಮಾದಾಳ ವಿರೂಪಾಕ್ಷಪ್ಪ ಮೆರವಣಿಗೆಗೆ ಇದು ಸರಿಯಲ್ಲ ಎಂಬ ಸ್ಪಷ್ಟ ಸೂಚನೆ ಕೊಟ್ಟಿದ್ದಾಗಿ ಹೇಳಿದರು.

ತಮ್ಮ ಮೇಲೆ ಡಿ.ಕೆ.ಶಿವಕುಮಾರ್. ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಬೊಮ್ಮಾಯಿ, ಆ ಪುಣ್ಯಾತ್ಮನಿಗೂ ಭ್ರಷ್ಟಾಚಾರಕ್ಕೂ ಬಿಡದ ನಂಟಿದೆ. ಅವರ ಬಾಯಲ್ಲಿ ಈ ರೀತಿ ಬರುವುದು ಸಹಜ ಎಂದರು. ಕಾಂಗ್ರೆಸ್ ನವರಿಗೆ ದೇಶಭಕ್ತರು ಉಗ್ರರ ಹಾಗೆ ಕಾಣುತ್ತಾರೆ, ನಮ್ಮ ದೇಶದ್ರೋಹಿಗಳು ಉಗ್ರರ ಬಾಗೇ ಕಾಣುತ್ತಾರೆ ಎಂದು ಸಿಎಂ ವಾಗ್ದಾಳಿ ನಡೆಸಿದರು.