Thursday, 12th December 2024

ವಿಜಯಪುರ: ಮಹಾನಗರ ಪಾಲಿಕೆ ಸದಸ್ಯೆಯ ಪತಿ ಹತ್ಯೆ

ವಿಜಯಪುರ: ವಿಜಯಪುರದಲ್ಲಿ ಮಹಾನಗರ ಪಾಲಿಕೆ ಸದಸ್ಯೆಯ ಪತಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿ ದ್ದಾರೆ. ಹತ್ಯೆಯಾದ ವ್ಯಕ್ತಿ ಕಾಂಗ್ರೆಸ್ ಪರವಾಗಿ ಪ್ರಚಾರದಲ್ಲಿ ತೊಡಗಿದ್ದ.

ಕೊಲೆಯಾದ ವ್ಯಕ್ತಿಯನ್ನು ಹೈದರ್ ಅಲಿ ನದಾಫ್ ಎಂದು ಗುರುತಿಸಲಾಗಿದೆ. ಪಾಲಿಕೆಯ ಪಕ್ಷೇತರ ಸದಸ್ಯೆ ನಿಶಾತ್ ಪತಿ ಹೈದರ್ ಅಲಿ ನದಾಫ್ ಮೇಲೆ ಶನಿವಾರ ದುಷ್ಕರ್ಮಿಗಳ ಗುಂಪು ಚಂದಾಪುರ ಕಾಲೋನಿಯಲ್ಲಿ ಗುಂಡಿನ ದಾಳಿ ನಡೆಸಿದೆ.

ಹಾಡಹಗಲೇ ಅದರಲ್ಲೂ ಚುನಾವಣಾ ಸಂದರ್ಭದಲ್ಲಿ ನಡೆದ ಘಟನೆಯಿಂದಾಗಿ ಜನರು ಬೆಚ್ಚಿ ಬಿದ್ದಿದ್ದಾರೆ. ದುಷ್ಕರ್ಮಿಗಳು ಪರಾರಿಯಾಗಿದ್ದು, ಗುಂಡಿನ ದಾಳಿಯಿಂದ ಗಾಯ ಗೊಂಡಿದ್ದ ಹೈದರ್ ಅಲಿ ನದಾಫ್ ರಸ್ತೆಯಲ್ಲೇ ಸಾವನ್ನಪ್ಪಿದ್ದಾರೆ.

ವಿಜಯಪುರ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಹುಡುಕಾಟವನ್ನು ಆರಂಭಿಸಿದ್ದಾರೆ.

ಕರ್ನಾಟಕದಲ್ಲಿ ಮೇ 10ರ ಬುಧವಾರ ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ಮತದಾನ ನಡೆಯಲಿದೆ. ಮೇ 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಿದ್ದು, ಅವರು ಸಹ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಗುಂಡಿನ ದಾಳಿ ನಡೆದಿದೆ.