ಈ ವೇಳೆ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸಚಿವ ನಳೀನ್ ಕುಮಾರ್ ಕಟೀಲ್ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ ಜಗ್ಗಾಡಿದ್ದಾರೆ. ಪೊಲೀಸ್ ಬಂದೋಬಸ್ತಿನಲ್ಲಿ ಕಟೀಲು ಪಾರಾಗಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read This
ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಕೆ
http://vishwavani.news/chargesheet-2/
ಹಿಂದೂ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ, ಲಾಠಿಚಾರ್ಜ್ ಕೂಡ ನಡೆಸಲಾಗಿದೆ. ಈ ವೇಳೆ ಹಿಂದೂ ಕಾರ್ಯಕರ್ತನೋರ್ವ ಗಾಯಗೊಂಡಿದ್ದಾನೆ. ಆತನನ್ನು ಸ್ಥಳೀಯರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಸಂಘ ಪರಿವಾರದ ಸಂಘಟನೆಗಳ ಕಾರ್ಯಕರ್ತರು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆ ಇದನ್ನು ತಡೆಯಲು ಯತ್ನಿಸಿದ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ.
ಸಂಘಪರಿವಾರದ ಸಂಘಟನೆಗಳ ಪ್ರಮುಖರು ಅಂಗಡಿಗಳ ಮುಂಗಟ್ಟು ಬಂದ್ ಮಾಡಲು ಕರೆ ನೀಡುತ್ತಿದ್ದಾರೆ. ಸುಮಾರು 50ಕ್ಕೂ ಕಾರ್ಯಕರ್ತರು ಸುಳ್ಯ ಮುಖ್ಯ ರಸ್ತೆಯಲ್ಲಿ ಚಲಿಸುತ್ತಾ ಅಂಗಡಿ ಬಂದ್ ಮಾಡಲು ಸೂಚನೆ ನೀಡಿದರು. ಸುಳ್ಯ ಹಳೆ ಗೇಟಿನಿಂದ ರಥ ಬೀದಿವರೆಗೆ ಎಲ್ಲಾ ಅಂಗಡಿಗಳು ಮುಚ್ಚಿವೆ.
ಖಾಸಗಿ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಆಟೋ ಚಾಲಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಔಷಧ ಅಂಗಡಿಗಳು, ಹಾಲಿನ ಅಂಗಡಿಗಳು ಎಂದಿನಂತೆ ಕಾರ್ಯಚರಿಸುತ್ತಿದೆ. ಶಾಲೆ ಕಾಲೇಜುಗಳಿಗೆ ದಿಢೀರ್ ರಜೆ ಘೋಷಿಸಿದ್ದರಿಂದ ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾರೆ.