Tuesday, 20th February 2024

ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಮತದಾನ ಆರಂಭ

ಚಿತ್ರದುರ್ಗ: ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿತ್ರದುರ್ಗ ಜಿಲ್ಲೆಯ 32 ಮತಗಟ್ಟೆಯಲ್ಲಿ ಬುಧವಾರ ಮತ ದಾನ ಆರಂಭವಾಗಿದೆ.

ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವೆಡೆ ತುರುಸಿನ ಮತದಾನ ನಡೆಯುತ್ತಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರು ಮತಗಟ್ಟೆ ಬಳಿ ಮತದಾರ ಮನವೊಲಿಕೆಗೆ ಪ್ರಯತ್ನಿಸುತ್ತಿದ್ದರು.

ಬಿಜೆಪಿಯ ಚಿದಾನಂದ ಎಂ.ಗೌಡ, ಕಾಂಗ್ರೆಸಿನ ರಮೇಶ್ ಬಾಬು, ಜೆಡಿಎಸ್’ನ ಚೌಡರೆಡ್ಡಿ ತೂಪಲ್ಲಿ ಸೇರಿ 15 ಅಭ್ಯರ್ಥಿಗಳು ಕಣ ದಲ್ಲಿದ್ದಾರೆ. ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ದರು. ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಜಿಲ್ಲೆಯಲ್ಲಿ 13,681 ಪುರುಷ ಹಾಗೂ 7,342 ಮಹಿಳೆಯರು ಸೇರಿದಂತೆ 21,024 ಮತದಾರರು ಇದ್ದಾರೆ. ಪ್ರತಿ ಮತಗಟ್ಟೆಗೂ ವೈಯ ಕ್ತಿಕ ಸುರಕ್ಷಾ ಸಾಧನ ಸಹಿತ ವೈದ್ಯಕೀಯ ಕಿಟ್ ಒದಗಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!