Saturday, 27th April 2024

ಡಿ.ಕೆ.ಶಿವಕುಮಾರ್’ಗೆ ವಾರೆಂಟ್: ಸೆ.29 ರಂದು ಸುಳ್ಯ ಕೋರ್ಟ್‌ನಲ್ಲಿ ವಿಚಾರಣೆ

ಸುಳ್ಯ : ಸುಳ್ಯ ನ್ಯಾಯಾಲಯವು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್’ಗೆ ವಾರೆಂಟ್ ಜಾರಿ ಮಾಡಿದ್ದು, ಸೆ.29 ರಂದು ವಿಚಾರಣೆಗೆ ಕೋರ್ಟ್ ಗೆ ಹಾಜರಾಗು ವಂತೆ ಸೂಚನೆ ನೀಡಲಾಗಿದೆ.

ವಿದ್ಯುತ್ ಸಮಸ್ಯೆ ಬಗ್ಗೆ ಬೆಳ್ಳಾರೆಯ ಸಾಯಿ ಗಿರಿಧರ್ ಮತ್ತು ಇಂಧನ ಖಾತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಅವರು ಗಿರಿಧರ್ ವಿರುದ್ಧ ದೂರು ನೀಡಿದ್ದರು. ಬಳಿಕ ಪೊಲೀಸರು ಗಿರಿಧರ್ ಅವರನ್ನು ಬಂಧಿಸಿದ್ದರು.

ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಅವರಿಗೆ ಸುಳ್ಯ ಕೋರ್ಟ್ ಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದ ಬಳಿಕವೂ ಕೋರ್ಟ್ ಗೆ ಹಾಜರಾಗಿರಲಿಲ್ಲ. ಇದೀಗ ವಿಚಾರಣೆಗೆ ಹಾಜರಾಗುವಂತೆ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.

ನ್ಯಾಯಾಲಯಕ್ಕೆ ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶರು ಡಿ.ಕೆ. ಶಿವಕುಮಾರ್ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲು ಐಜಿಪಿ ಮತ್ತು ಡಿಐಜಿಗೆ ಕೂಡ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!