Saturday, 26th October 2024

ಕಲುಷಿತ ನೀರು ಪೂರೈಕೆ: ಮೃತರ ಸಂಖ್ಯೆ 5ಕ್ಕೆ ಏರಿಕೆ

ರಾಯಚೂರು: ನಗರದ ಕೆಲವು ವಾರ್ಡ್‌ಗಳಲ್ಲಿ ಕಲುಷಿತ ನೀರು ಪೂರೈಕೆಯಿಂದ ಅಸ್ವಸ್ಥಗೊಂಡು, ಈಗಾಗಲೇ ನಾಲ್ವರು ಮೃತಪಟ್ಟಿದ್ದರು. ಇದೀಗ ಆಸ್ಪರ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಒಟ್ಟಾರೆ  ಮೃತರ ಸಂಖ್ಯೆ 5ಕ್ಕೇರಿದೆ.

ರಾಯಚೂರು ನಗರದ 35 ವಾರ್ಡ್‌ಗಳಿಗೆ ಕಲುಷಿತ ನೀರು ಪೂರೈಕೆಯಾದ ಪರಿಣಾಮ ಮೇ 31ರಂದು ವಾಂತಿ ಬೇಧಿ ಉಲ್ಭಣ ಗೊಂಡು ಮಹಿಳೆಯೊಬ್ಬರು ಮೃತಪಟ್ಟಿದ್ದರು. ಹಲವಾರು ಮಂದಿ ಗಂಭೀರ ಪರಿಸ್ಥಿತಿಯಲ್ಲಿ ರಿಮ್ಸ್‌ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವಾರದ ಅಂತರದಲ್ಲಿ ಸಾವಿನ ಸಂಖ್ಯೆ 5ಕ್ಕೇ ಏರಿಕೆಯಾಗಿದೆ.

ಕಳೆದ 15 ವರ್ಷಗಳಿಂದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸದ ಕಾರಣ ನಗರದಲ್ಲಿ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ಶಂಕಿಸ ಲಾಗಿದೆ. ಅಲ್ಲದೆ ಈ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿದ್ದರೂ ನಗರಕ್ಕೆ ಇದೇ ನೀರನ್ನು ಪೂರೈಕೆ ಮಾಡ ಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಕಲುಷಿತ ನೀರು ಕುಡಿದು ಐವರ ಸಾವು: ಈಗಾಗಾಗಲೆ ನೂರಾರು ಮಂದಿ ಕಲುಷಿತ ನೀರು ಕುಡಿದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ 48 ವರ್ಷದ ಜನಕರಾಜ್‌ ಎಂಬುವವರು ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟಿದ್ದಾರೆ. ಇದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಸಾವಾಗಿದೆ. ಈಗಾಗಲೇ ಮಲ್ಲಮ್ಮ(40), ಅಬ್ದುಲ್ ಗಫೂರ್(37), ಅರಬ್ ಮೊಹಲ್ಲಾ ಮಹ್ಮದ್‌ ನೂರ್ (43) ಮತ್ತು ಅಬ್ದುಲ್ ಕರೀಂ(50) ಮೃತಪಟ್ಟಿದ್ದರು.

ಒಟ್ಟು 15 ಲಕ್ಷ ಪರಿಹಾರ: ಕಲುಷಿತ ನೀರು ಕುಡಿದು ನಾಲ್ವರು ನಿಧರಾಗುತ್ತಿದ್ದಂತೆ ಪಕ್ರರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಈಗಾಗಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಸ್ಥಳೀಯ ಆಡಳಿತ ದಿಂದಲೂ 10 ಲಕ್ಷ ಪರಿಹಾರ ಘೋಷಣೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರು ವವರಿಗೂ 20 ಸಾವಿರ ವೈದ್ಯಕೀಯ ವೆಚ್ಚ ನೀಡಲು ನಿರ್ಧರಿಸಲಾಗಿದೆ.

ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ: ನೀರಿನ ಶುದ್ದೀಕರಣ ಹಾಗೂ ಸರಬರಾಜು ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯವಹಿಸಿ ಐವರ ಸಾವಿಗೆ ಕಾರಣರಾಗಿರುವುದಕ್ಕೆ ಈಗಾಗಲೆ ಇಬ್ಬರು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಉಳಿದವರ ತಪ್ಪಿನ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದ್ದು, ಅವರಿಂದಲೂ ತಪ್ಪು ನಡೆದಿದೆ ಎಂದಾದರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು. ಆದರೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಪ್ರಸ್ತಾಪವಿಲ್ಲ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಅರ್ಚನಾ ತಿಳಿಸಿದ್ದಾರೆ.

25 ಲಕ್ಷ ಅನುದಾನ ನೀಡಲು ಒತ್ತಾಯ: ಅಧಿಕಾರಿಗಳ ಅಜಾಗರುಕತೆಯಿಂದ ಮೃತಪಟ್ಟವರಿಗೆ ನಷ್ಟ ಪರಿಹಾರ ಒದಗಿಸುವ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿದೆ. ಆದರೆ ಮೃತ ಕುಟುಂಬಗಳಿಗೆ 5 ಅಥವಾ 10 ಲಕ್ಷ ಪರಿಹಾರ ನೀಡುವುದರಿಂದ ಉಪಯೋಗವಿಲ್ಲ. ತಲಾ ಒಂದು ಕುಟುಂಬಕ್ಕೆ 25 ಲಕ್ಷ ಅನುದಾನ ನೀಡಬೇಕೆಂದು ಈಗಾಗಲೆ ನಿವಾಸಿಗಳು ಪ್ರತಿಭಟನೆಯ ಮೂಲಕ ಒತ್ತಾಯಿಸಿದ್ದಾರೆ.

ವಾಂತಿ ಬೇಧಿಯಿಂದ ನರಳಾಟ: ಅಧಿಕಾರಿಗಳ ಅಜಾಗರುಕತೆಯಿಂದ ಮೃತಪಟ್ಟವರಿಗೆ ನಷ್ಟ ಪರಿಹಾರ ಒದಗಿಸುವ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿದೆ. ಆದರೆ ಮೃತ ಕುಟುಂಬಗಳಿಗೆ 5 ಅಥವಾ 10 ಲಕ್ಷ ಪರಿಹಾರ ನೀಡುವುದರಿಂದ ಉಪಯೋಗವಿಲ್ಲ. ತಲಾ ಒಂದು ಕುಟುಂಬಕ್ಕೆ 25 ಲಕ್ಷ ಅನುದಾನ ನೀಡಬೇಕೆಂದು ಈಗಾಗಲೆ ನಿವಾಸಿಗಳು ಪ್ರತಿಭಟನೆಯ ಮೂಲಕ ಒತ್ತಾಯಿಸಿದ್ದಾರೆ.

ಕಲುಷಿತ ನೀರು ಕುಡಿದ ಅಶ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹಲವರು ಮಂದಿ ಈಗಲೂ ವಾಂತಿ ಬೇದಿಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ 20ಕ್ಕೂ ಹೆಚ್ಚಿನವರ ಪರಿಸ್ಥಿತಿ ಗಂಭೀರವಾಗಿದೆ. ಕೆಲವರು ಮೂರ್ತಪಿಂಡ ಸಮಸ್ಯೆಯಿಂದ ಬಳಲುತ್ತಿದ್ದು, ಶೀಘ್ರದಲ್ಲಿ ಡಯಾಲಿಸಿಸ್‌ ಮಾಡಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆ ಸೇರಿರುವವರಲ್ಲಿ ಚಿಕ್ಕ ಮಕ್ಕಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆರೋಗ್ಯು ಸಮಸ್ಯೆ ಉಂಟಾಗಿದೆ ಎಂದು ತಿಳಿದುಬಂದಿದೆ.