Wednesday, 11th December 2024

ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ : ತರಾಟೆ

tumkur
ತುಮಕೂರು: ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಚೌಧರಿ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪ್ರಸೂತಿ ಕೊಠಡಿ, ಮಹಿಳಾ ವಾರ್ಡ್, ಮಕ್ಕಳ ವಾರ್ಡ್, ಎನ್.ಐ.ಸಿ ಕೊಠಡಿ, ಹೊರರೋಗಿ ವಿಭಾಗಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯದ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.
ನಂತರ ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿದ ಅವರು, ಆಸ್ಪತ್ರೆ ಆವರಣ ಮತ್ತು ವಾರ್ಡ್ಗಳ ಸ್ವಚ್ಛತೆಯನ್ನು ಪರಿಶೀಲಿಸಿ ರೋಗಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕೆಂದು ಜಿಲ್ಲಾ ಶಸ್ತçಚಿಕಿತ್ಸಕ ಡಾ: ಅಜಗರ್ ಬೇಗ್ ಅವರಿಗೆ ಸೂಚಿಸಿ  ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಎಂ.ಎನ್, ಜಿಲ್ಲಾ ನಿರೂಪಣಾಧಿಕಾರಿ ದಿನೇಶ್ ಆರ್.ಎಂ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ಆರ್.ಎಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್, ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.