ಬೆಂಗಳೂರು(ಅರಮನೆ ಮೈದಾನ): ಮೊಳಗಿದ ವೇದಘೊಷಗಳ ನಡುವೆ ಹವ್ಯಕ ಮಹಾಸಭಾದಿಂದ ವಿಶ್ವ ಹವ್ಯಕ ಸಮ್ಮೇಳನಕ್ಕೆ ಶ್ರೀ ರಾಘವೇಶ್ವರ ಭಾರತೀ ಶ್ರೀಗಳು ನಗರದ ಅರಮನೆ ಮೈದಾನದಲ್ಲಿ ವಿದ್ಯುಕ್ತ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಾಸಭಾಧ್ಯಕ್ಷ ಗಿರಿಧರ ಕಜೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವ ಅಶ್ವಥ್ ನಾರಾಯಣ, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ಅಶೋಕ ಹಾರ್ನಳ್ಳಿ, ನಾಡೋಜ ಮಹೇಶ ಜೋಶಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಮುಂತಾದವರಿದ್ದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಆತ್ಮಕ್ಕೆ ಶಾಂತಿ ಕೋರಲಾಯಿತು.