Saturday, 14th December 2024

ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಮರ ಬಿದ್ದು ಯುವಕ‌ ಸಾವು

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗಾಳಿ ಮಳೆಯ ಅವಾಂತರದಿಂದ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಮರ ಬಿದ್ದು ಯುವಕ‌ ಮೃತಪಟ್ಟಿದ್ದಾನೆ.

ಯಲ್ಲಾಪುರ ಶಿರಸಿ ರಸ್ತೆಯ ಬಾಚನಳ್ಳಿ ಗ್ರಾಮದ ಬಳಿ ನಡೆದಿದೆ. ಯಲ್ಲಾಪುರ ತಾಲೂಕಿನ ವಿನಯ ಗಾಡಿಗ(25) ಮೃತ ದುರ್ದೈವಿ ಬೈಕ್ ಸವಾರನಾಗಿದ್ದು,
ಯಲ್ಲಾಪುರದ ಹಾಸಣಗಿ ಪಂಚಾಯತ್ ವ್ಯಾಪ್ತಿಯ ಕಬ್ಬಿನಗದ್ದೆ ನಿವಾಸಿಯಾಗಿದ್ದನೆಂದು ತಿಳಿದು ಬಂದಿದೆ.

ಯಲ್ಲಾಪುರದಿಂದ ಮಂಚಿಕೇರಿ ಕಡೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೈಮೇಲೆ ಮರ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿ ದ್ದಾನೆ. ಸ್ಥಳಕ್ಕೆ ಅರಣ್ಯ ಇಲಾಖೆ, ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಸಂಚಾರಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಮರ ತುಂಡರಿಸಿ ತೆರವುಗೊಳಿಸಿ ದ್ದಾರೆ.

ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಖರಣ ದಾಖಲಾಗಿದೆ.