Thursday, 12th December 2024

tumkuruniversity: ಭಾರತದ ಭವಿಷ್ಯ ರೂಪಿಸುವಲ್ಲಿ ಯುವಜನರ ಪಾತ್ರ ಪ್ರಮುಖ

tumkur

ತುಮಕೂರು: ಭಾರತ ದೇಶದ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವುದರಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಎಂದು ತುಮಕೂರು ವಿವಿ ಸ್ನಾತಕೋತ್ತರ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಬಿ.ಶೇಖರ್ ತಿಳಿಸಿದರು.

ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

ಚಾಲ್ತಿ ಸಾಲಿನಲ್ಲಿ ಭಾರತದ ಆರ್ಥಿಕತೆಯ ಬೆಳವಣಿಗೆ ಯುಕೆ ಮತ್ತು ಚೀನಾ ಸೇರಿದಂತೆ ಇತರೆ ದೇಶಗಳ ಆರ್ಥಿಕ ಬೆಳವಣಿಗೆಯನ್ನು ಮೀರಿಸುವ ನಿರೀಕ್ಷೆಯಿದೆ. 2030ರ ವೇಳೆಗೆ 5 ಟ್ರಿಲಿಯನ್ ಡಾಲರ್ಸ್ ನಷ್ಟು ಆರ್ಥಿಕತೆಯನ್ನು ತಲುಪುವ ಮೂಲಕ ಜಪಾನ್, ಜರ್ಮನಿ, ಚೀನಾದಂತಹ ರಾಷ್ಟ್ರಗಳ ಜಾಗತಿಕ ನಾಯಕತ್ವವನ್ನು ತನ್ನದಾಗಿಸಿಕೊಳ್ಳವತ್ತ ಮಹತ್ವದ ಹೆಜ್ಜೆಯನ್ನಿಡುತ್ತಿದ್ದು, ಈ ಅವಧಿಯಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ ಜಿ. ಟಿ., ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ ಮಹಾಂತೇಶ , ಸ್ನಾತಕೋತ್ತರ ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ ನಂದನ್, ಪ್ರೊ ಜಗದೀಶ್ ಮತ್ತು ಪ್ರೊ ಸರ್ವಮಂಗಳ , ಎಂಕಾಂ, ಎಂಸಿಎ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.