Wednesday, 8th February 2023

ಡಿ.ಕೆ.ಶಿ ನಿವಾಸದ ಮೇಲೆ ಸಿಬಿಐ ದಾಳಿಗೆ ಕನಕಪುರದಲ್ಲಿ ಖಂಡನೆ, ಪ್ರತಿಭಟನೆ

ರಾಮನಗರ: ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿ ಗಳು ದಾಳಿ ನಡೆಸಿದ್ದು, ಕನಕಪುರದಲ್ಲಿ ದಾಳಿ ಖಂಡಿಸಿ ಪ್ರತಿಭಟನೆ ನಡೆದಿದೆ.

ಡಿಕೆಶಿ ಹುಟ್ಟೂರು ದೊಡ್ಡ ಆಲಹಳ್ಳಿ ಗ್ರಾಮದ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಕನಕಪುರ ತಾಲೂಕಿನ ನಲ್ಲಹಳ್ಳಿ ಗ್ರಾಮದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಡಿಕೆಶಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸ, ಡಿ. ಕೆ. ಸುರೇಶ್ ನಿವಾಸದ ಮೇಲೆಯೂ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಸದ್ಯಕ್ಕೆ ದೊಡ್ಡ ಆಲಹಳ್ಳಿ ಗ್ರಾಮದ ಡಿಕೆಶಿ ಮನೆಯಲ್ಲಿ ನಾಲ್ಕು ಗಂಟೆಗಳ ಕಾಲ ಸಿಬಿಐ ತಂಡ ತಪಾಸಣೆ ಅಂತ್ಯಗೊಳಿಸಿ ಹೊರಟಿದ್ದು, ಅಧಿಕಾರಿಗಳು ಮನೆಯಿಂದ ಹೊರಡುವ ಸಂದರ್ಭ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯ ಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

error: Content is protected !!