ಧಾರವಾಡ: ಹಿರಿಯ ಗಾಯಕ, ಪ್ರಾಧ್ಯಾಪಕ ಡಾ.ರಾಜಶೇಖರ ಮನಸೂರ (79) ಅವರು ಬೆಂಗಳೂರಿನಲ್ಲಿ ನಿಧನರಾದರು.
ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಪಂ. ಮಲ್ಲಿಕಾರ್ಜುನ ಮನ ಸೂರ ಅವರ ಪುತ್ರ ಡಾ. ರಾಜಶೇಖರ ಮನಸೂರ ಅವರು ಜೈಪುರ ಅತ್ರೌಲಿ ಘರಾಣೆ ಸಂಗೀತದ ಮೇರು ಗಾಯಕರಾಗಿದ್ದರು. ಇಂಗ್ಲೆಂಡ್ನಲ್ಲಿ ಶಿಕ್ಷಣ ಪೂರೈಸಿ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು.
ಆಲ್ ಇಂಡಿಯಾ ರೇಡಿಯೋದ ಉನ್ನತ ಶ್ರೇಣಿಯ ಕಲಾವಿದರಾಗಿದ್ದ ಇವರು ಬಹಳಷ್ಟು ಪ್ರಮುಖ ವೇದಿಕೆಯಲ್ಲಿ ಕಛೇರಿ ನೀಡಿ ದ್ದಾರೆ. ಇವರ ಗಾಯನದ ಧ್ವನಿಮುದ್ರಿಕೆಗಳನ್ನು ಭೋಪಾಲ್ನಲ್ಲಿರುವ ಇಂದಿರಾಗಾಂಧಿ ರಾಷ್ಟ್ರೀಯ ಮನುಕುಲ ಸಂಗ್ರಹಾಲಯ ದಲ್ಲಿ ಸಂಗ್ರಹಿಸಿಡಲಾಗಿದೆ.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಇವರಿಗೆ ಕರ್ನಾಟಕ ರಾಜ್ಯೋ ತ್ಸವ ಪ್ರಶಸ್ತಿ, ಸಂಗೀತ ನಾಟಕ ಅಕಾ ಡೆಮಿ ಪ್ರಶಸ್ತಿಗಳು ಸಂದಿವೆ. ಸಂಜೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಿತು.