Friday, 9th December 2022

ಬಿಜೆಪಿ ಯುವ ಮೋರ್ಚಾ ಅಧಿವೇಶನದಲ್ಲಿ ರಾಹುಲ್ ದ್ರಾವಿಡ್ ?

ಧರ್ಮಶಾಲಾ: ಮೇ.12 ರಿಂದ 15ರವರೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾ ದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧಿವೇಶನದಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸ ಲಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತಿತರ ಪಕ್ಷದ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ಧರ್ಮಶಾಲಾ ಬಿಜೆಪಿ ಶಾಸಕ ವಿಶಾಲ್ ನೆಹ್ರಿಯಾ ತಿಳಿಸಿದ್ದಾರೆ.

ಮೂರು ದಿನಗಳ ಸೆಷನ್ಸ್ ನಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಪಾಲ್ಗೊಳ್ಳಲಿದ್ದು, ದೇಶಾದ್ಯಂತ 139 ಪ್ರತಿನಿಧಿಗಳು ಉಪಸ್ಥಿತ ರಿರುವರು.