Monday, 6th February 2023

ಕಳ್ಳಬಟ್ಟಿ ದುರಂತ: 5 ಮಂದಿ ಸಾವು

ಪಾಟ್ನಾ: ಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ ಸಂಭವಿಸಿದ್ದು, ನಕಲಿ ಮದ್ಯ ಸೇವಿಸಿ ಕನಿಷ್ಠ 5 ಮಂದಿ ಮೃತಪಟ್ಟಿದ್ದಾರೆ.
ಬಿಹಾರದ ಸಿವಾನ್ ಜಿಲ್ಲೆಯ ಲಕಾರಿ ನಬಿಗಂಜ್ನ ಬಾಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ.
ತೀವ್ರವಾಗಿ ಅಸ್ವಸ್ಥರಾಗಿರುವ ಎಲ್ಲರೂ ಸಿವಾನ್ನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಕಲಿ ಮದ್ಯ ಸೇವನೆಯಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ದುರಂತಕ್ಕೆ ಸಂಬಂಧಿಸಿದಂತೆ ಇದುವರೆಗೆ 16 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
error: Content is protected !!