ಚಿಕ್ಕಮಗಳೂರು: ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೆಗೌಡ ಕಡೂರು ತಾಲೂಕಿನ ಗುಣಸಾಗರದ ಸಮೀಪ ಸೋಮ ವಾರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾರಿನಲ್ಲಿಯೇ ಚಾಲಕನನ್ನು ಇರುವಂತೆ ಹೇಳಿದ್ದ ಎಸ್ ಎಲ್ ಧರ್ಮೆಗೌಡ ರೈಲ್ವೆ ಹಳಿ ಯತ್ತ ಸಾಗಿ ಈ ಕೃತ್ಯ ಎಸಗಿದ್ದಾರೆ. ಚಿಕ್ಕಮಂಗಳೂರು ಶಾಸಕ ಸಿ.ಟಿ.ರವಿ ಸ್ಥಳಕ್ಕೆ ಧಾವಿಸಿದ್ದು, ಸ್ಥಿತಿಗತಿ ಪರಿಶೀಲಿಸಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ತೆರಳಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.