Thursday, 2nd February 2023

ಹಾಸನದಲ್ಲಿ ಭೂಕಂಪನ: 3.4 ಮ್ಯಾಗ್ನಿಟ್ಯೂಡ್ ತೀವ್ರತೆ

ಹಾಸನ: ಜಿಲ್ಲೆಯ ಕೆಲವೆಡೆ ಗುರುವಾರ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿ ದ್ದರು. ನಿದ್ರೆಯ ಮಂಪರಿನಲ್ಲಿದ್ದ ಜನರು ಗಾಬರಿ ಗೊಂಡು ಮನೆಗಳಿಂದ ಹೊರಬಂದರು.

ಹೊಳೆನರಸೀಪುರ ತಾಲ್ಲೂಕಿನ ಮಾಲುಗೇನಹಳ್ಳಿಯಲ್ಲಿ ಕಂಪನ ಕೇಂದ್ರವಾಗಿದ್ದು, ಸುತ್ತಲಿನ 40-50 ಕಿ.ಮೀ. ವ್ಯಾಪ್ತಿಯಲ್ಲಿ ಕಂಪನದ ಅನುಭವವಾಗಿದೆ. ಇದರ ತೀವ್ರತೆ 3.4 ಮ್ಯಾಗ್ನಿಟ್ಯೂಡ್ ಆಗಿತ್ತು.

ಭೂಕಂಪನದ ಸಾಧ್ಯತೆಗಳು ಕಡಿಮೆ ಇರುತ್ತವೆ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕರು ತಿಳಿಸಿ ದ್ದಾರೆ. ಅರಕಲಗೂಡು ಮತ್ತು ಹೊಳೆನರಸೀಪುರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಜನರಿಗೆ ಭೂಮಿಯು ಕಂಪಿಸಿರುವುದು ಅನುಭವಕ್ಕೆ ಬಂದಿದೆ.

ಅರಕಲಗೂಡು ಪಟ್ಟಣ, ತಾಲ್ಲೂಕಿನ ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಳ್ಳಿ, ಹೊಳೆ ನರಸೀಪುರ ತಾಲ್ಲೂಕಿನ ಚಿಟ್ನಳ್ಳಿ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ಭೂಮಿಯು ಕಂಪಿಸಿದ್ದು ಸ್ಪಷ್ಟವಾಗಿ ಜನರ ಅರಿವಿಗೆ ಬಂದಿದೆ.

error: Content is protected !!