Tuesday, 9th August 2022

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಬಲ ಭೂಕಂಪನ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಪ್ರಬಲ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದ್ದು, ಕಂಪದ ಕೇಂದ್ರಬಿಂದುವನ್ನು ತಜಕಿಸ್ತಾನದಲ್ಲಿ ಗುರುತಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಯಾವುದೇ ಪ್ರಾಣ ಹಾನಿ ಹಾಗೂ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಭೂಕಂಪದ ಕೇಂದ್ರಬಿಂದು ತಜಕಿಸ್ತಾನದಲ್ಲಿ 170 ಕಿ.ಮೀ ಆಳದಲ್ಲಿ ಗುರುತಿಸಲಾಗಿದೆ.

ಕಳೆದ ತಿಂಗಳು 18ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪನದ ಅನುಭವವಾಗಿತ್ತು. ಭೂ ಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.4ರಷ್ಟು ದಾಖಲಾಗಿತ್ತು. ಕಿಶ್ತ್ವಾರ್‌ನಲ್ಲಿ ಸೋಮವಾರ ಮಧ್ಯ ರಾತ್ರಿ 12:9 ಕ್ಕೆ ಭೂಕಂಪದ ಅನುಭವವಾಗಿದೆ.