ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಶಿಕ್ಷಣ
Mid Day Meal: ರಾಜ್ಯದ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಬಿಸಿಯೂಟ: ಸರ್ಕಾರ ಆದೇಶ

ರಾಜ್ಯದ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಬಿಸಿಯೂಟ: ಸರ್ಕಾರ ಆದೇಶ

ಏಪ್ರಿಲ್- ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಒದಗಿಸಲಾಗುತ್ತದೆ. 7393.78 ಲಕ್ಷಗಳನ್ನು ಇದಕ್ಕಾಗಿ ನೀಡಲಾಗಿದೆ.

Kendriya Vidyalaya: ಪೋಷಕರೇ ಗಮನಿಸಿ, ಕೇಂದ್ರೀಯ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಓಪನ್‌

ಪೋಷಕರೇ ಗಮನಿಸಿ, ಕೇಂದ್ರೀಯ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಓಪನ್‌

ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿಯ ಮಕ್ಕಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಮುನ್ನ, ಮಗುವಿನ ಕನಿಷ್ಠ ವಯಸ್ಸು 06 ವರ್ಷಗಳು ಆಗಿರಬೇಕು. ಎಲ್ಲಾ ತರಗತಿಗಳಿಗೆ ವಯಸ್ಸನ್ನು 31.03.2025 ರಂತೆ ಲೆಕ್ಕಹಾಕಲಾಗುತ್ತದೆ. 2025-26 ರ ಕೆವಿಎಸ್ ಪ್ರವೇಶ ಮಾರ್ಗಸೂಚಿಗಳ ಪ್ರಕಾರ ತರಗತಿಗಳಲ್ಲಿ ಸೀಟುಗಳನ್ನು ಕಾಯ್ದಿರಿಸಲಾಗುವುದು.

PM internship scheme: ಪಿಎಂ ಇಂಟರ್ನ್‌ಶಿಪ್ ಯೋಜನೆ ನೋಂದಣಿ ಆರಂಭ; ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ?

ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ನೋಂದಣಿ ಆರಂಭ

ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಪಿಎಂ ಇಂಟರ್ನ್‌ಶಿಪ್ ಯೋಜನೆ 2025ಗಾಗಿ ನೋಂದಣಿ ಪ್ರಾರಂಭಿಸಿದೆ. ತನ್ನ ಅಧಿಕೃತ ಪೋರ್ಟಲ್, pminternship.mca.gov.in ನಲ್ಲಿ PM ಇಂಟರ್ನ್‌ಶಿಪ್ ಯೋಜನೆ 2025 ನೋಂದಣಿ ಪ್ರಕ್ರಿಯೆ ಶುರು ಮಾಡಿದ್ದು ಆಸಕ್ತರು ನೋಂದಣಿ ಮಾಡಿಕೊಳ್ಳಬಹುದಾಗಿದೆ. 21 ರಿಂದ 24 ವರ್ಷದೊಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

Reliance: ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಫಲಿತಾಂಶ ಪ್ರಕಟ

ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಫಲಿತಾಂಶ ಪ್ರಕಟ

Reliance: ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ 2024-25ರ ಫಲಿತಾಂಶವನ್ನು ಘೋಷಣೆ ಮಾಡಲಾಗಿದೆ. ಈ ವಿದ್ಯಾರ್ಥಿ ವೇತನವು 6 ಲಕ್ಷ ರೂಪಾಯಿ ತನಕದ ಹಣಕಾಸು ನೆರವು ಹಾಗೂ ಅದರ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯಾಣದುದ್ದಕ್ಕೂ ಸಮಗ್ರ ಸಾಮರ್ಥ್ಯ ನಿರ್ಮಾಣವನ್ನು ಸಹ ಒಳಗೊಂಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.

Madhu Bangarappa: ಕರ್ನಾಟಕ ಬಂದ್‌ಗಾಗಿ 7, 8, 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡುವುದಿಲ್ಲ: ಮಧು ಬಂಗಾರಪ್ಪ

ಬಂದ್‌ಗಾಗಿ 7, 8, 9ನೇ ತರಗತಿ ಪರೀಕ್ಷೆ ಮುಂದೂಡುವುದಿಲ್ಲ: ಮಧು ಬಂಗಾರಪ್ಪ

ಮಕ್ಕಳು ಗೊಂದಲ ಆಗುವುದು ಬೇಡ. 6,7,8,9 ನೇ ತರಗತಿ ಪರೀಕ್ಷೆಗಳು ನಿಗದಿಯಂತೆ ನಡೆಯುತ್ತವೆ. ಮಕ್ಕಳು ಪರೀಕ್ಷೆ ಬರೆಯಲಿ. ಈಗಾಗಲೇ ವೇಳಾಪಟ್ಟಿ ಸಿದ್ಧತೆ ಮಾಡಿ ಪ್ರಕಟ ಮಾಡಿದ್ದೇವೆ‌. ವೇಳಾಪಟ್ಟಿ ಬದಲಾವಣೆ ಆದರೆ, ಕಷ್ಟ ಆಗುತ್ತದೆ. ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಿಕೆ ಸರಿಯಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

2nd PUC Exam: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಅಕ್ರಮ ತಡೆಗೆ ವೆಬ್‌ ಕಾಸ್ಟಿಂಗ್

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಅಕ್ರಮ ತಡೆಗೆ ವೆಬ್‌ ಕಾಸ್ಟಿಂಗ್

7,13 862 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,61,474 ತರಗತಿ ವಿದ್ಯಾರ್ಥಿಗಳಿದ್ದಾರೆ. ಪರೀಕ್ಷಾ ಅಕ್ರಮ ತಡೆಗೆ ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ (SSLC exam) ಜಾರಿಗೊಳಿಸಿದ್ದ ವೆಬ್ ಕಾಸ್ಟಿಂಗ್ (Web casting) ಕಣ್ಗಾವಲನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿಸ್ತರಿಸಲಾಗಿದೆ. 1171 ಕೇಂದ್ರಗಳ ಪ್ರತಿ ಕೊಠಡಿಯಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.‌

PUC Exam: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಭಾರಿ ಕಣ್ಗಾವಲು

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಭಾರಿ ಕಣ್ಗಾವಲು

7,13 862 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,61,474 ತರಗತಿ ವಿದ್ಯಾರ್ಥಿಗಳಿದ್ದಾರೆ. ಪರೀಕ್ಷಾ ಅಕ್ರಮ ತಡೆಗೆ ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ (SSLC exam) ಜಾರಿಗೊಳಿಸಿದ್ದ ವೆಬ್ ಕಾಸ್ಟಿಂಗ್ (Web casting) ಕಣ್ಗಾವಲನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿಸ್ತರಿಸಲಾಗಿದೆ. 1171 ಕೇಂದ್ರಗಳ ಪ್ರತಿ ಕೊಠಡಿಯಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

CM Siddaramaiah: ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿದ್ದರಾಮಯ್ಯ ಘೋಷಣೆ

ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ

ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾದ ಪುಸ್ತಕ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Kalaburagi News: ದೇಶದ 28 ವಿವಿಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಆರೋಪಿ ಬಂಧನ

ದೇಶದ 28 ವಿವಿಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ

ಕಲಬುರಗಿಯ ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ, ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಲಾಗಿದೆ. ಜತೆಗೆ ಪ್ರಮುಖ ಆರೋಪಿ ದಿಲ್ಲಿ ಮೂಲದ ರಾಜೀವ್ ಸಿಂಗ್ ಅರೋರಾ ಎಂಬಾತನನ್ನು ಬಂಧಿಸಲಾಗಿದೆ.

Kalaburagi News: ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ: ವಿವಿಧ ದಾಖಲೆಗಳ ಪರಿಶೀಲನೆ

ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ

ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಗುರುವಾರ (ಫೆ. 27) ಬೆಳಗ್ಗೆ ಲೋಕಾಯುಕ್ತದ 5 ತಂಡಗಳು ದಾಳಿ ನಡೆಸಿವೆ. ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ವೇಳೆ ವಿವಿಧ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

KPSC Group B Exam: ಕೆಪಿಎಸ್‌ಸಿ ಗ್ರೂಪ್ ‘ಬಿʼ ಹುದ್ದೆ ನೇಮಕಾತಿ ಪರೀಕ್ಷೆ: ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಡಿಸಿ ಸೂಚನೆ

ನಾಳೆಯಿಂದ ಕೆಪಿಎಸ್‌ಸಿ ಗ್ರೂಪ್ ‘ಬಿʼ ಹುದ್ದೆ ನೇಮಕಾತಿ ಪರೀಕ್ಷೆ

Kalaburagi News: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಯಲ್ಲಿನ ಗ್ರೂಪ್ ‘ಬಿ’ ಹುದ್ದೆಗಳ ನೇಮಕಾತಿಗೆ ಇದೇ ಫೆಬ್ರವರಿ 23 ರಿಂದ 28 ರವರೆಗೆ ಕಲಬುರಗಿ ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ ಸ್ಫರ್ಧಾತ್ಮಕ ಪರೀಕ್ಷೆ ನಡೆಯಲಿವೆ. ಈ ಕುರಿತ ವಿವರ ಇಲ್ಲಿದೆ.

2nd PUC Exam: ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ವಿವರ ಇಲ್ಲಿದೆ

ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ವಿವರ ಇಲ್ಲಿದೆ

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ದಾಖಲಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಎರಡು ಗಂಟೆ ಮುಂಚಿತವಾಗಿ ಬೆಳಿಗ್ಗೆ 8ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ಅಥವಾ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

DK Shivakumar: ನೃಪತುಂಗ ಸೇರಿ 9 ವಿಶ್ವವಿದ್ಯಾಲಯಗಳಿಗೆ ಬೀಗ: ಸರ್ಕಾರ ನಿರ್ಧಾರ

ನೃಪತುಂಗ ಸೇರಿ 9 ವಿಶ್ವವಿದ್ಯಾಲಯಗಳಿಗೆ ಬೀಗ: ಸರ್ಕಾರ ನಿರ್ಧಾರ

ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ ಎಲ್ಲಾ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ.

Pariksha Pe Charcha: ಪರೀಕ್ಷಾ ಪೆ ಚರ್ಚಾ ; ಮೋದಿ ಹೇಳಿದ ಯಶಸ್ಸಿನ ಸೂತ್ರಗಳೇನು?

ವಿದ್ಯಾರ್ಥಿಗಳಿಗೆ ಮೋದಿ ಹೇಳಿದ ಪರೀಕ್ಷೆಯ ಗುಟ್ಟೇನು?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮತ್ತು ಪಾಲಕರ ಜೊತೆ ಮಾತನಾಡಿದ್ದು, ಕೆಲ ಸಲಹೆಗಳನ್ನು ನೀಡಿದ್ದಾರೆ. ಒತ್ತಡ ನಿರ್ವಹಣೆ ಹಾಗೂ ಆಹಾರ ಪದ್ಧತಿಯ ಬಗ್ಗೆಯೂ ಮೋದಿ ಮಾತನಾಡಿದ್ದಾರೆ.

Pariksha Pe Charcha: ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ: ಬಾಲಕಿಯ‌ ಪಟಪಟ ಹಿಂದಿ ಮಾತುಗಳಿಗೆ ಮೋದಿ ಫುಲ್‌ ಫಿದಾ!

ಕೇರಳದ ಬಾಲಕಿಯ ಪಟಪಟ ಹಿಂದಿ ಮಾತುಗಳಿಗೆ ಮೋದಿ ಫಿದಾ!

ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಫೆ.10) ಲಕ್ಷಾಂತರ ವಿದ್ಯಾರ್ಥಿಗಳೊಂದಿಗೆ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಮೂಲಕ ಸಂವಾದ ನಡೆಸಿದರು. ಸಂವಾದದ ವೇಳೆ ಕೇರಳ ಮೂಲದ ವಿದ್ಯಾರ್ಥಿನಿಯೊಬ್ಬಳ ಸ್ಪಷ್ಟವಾದ ಹಿಂದಿ ಮಾತು ಕೇಳಿ ಮೋದಿ ಅಚ್ಚರಿಗೊಂಡಿದ್ದಾರೆ.

SSLC preparatory Exam: ಫೆ.25ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ

ಫೆ.25ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯೂ ಏಕ ರೂಪದ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ ನೀಡಲು ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯು ಎಲ್ಲಾ ಜಿಲ್ಲಾ ಉಪ ನಿರ್ದೇಶಕರಿಗೆ ಆನ್‌ಲೈನ್‌ ಮೂಲಕ ಕಳುಹಿಸಲಿದೆ.

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ: ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ  ಮನ್ನಣೆ

ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಕ್ಕೆ ಕೇಂದ್ರ ನಿಯಂತ್ರಣದ ನಿಯಮ ಜಾರಿ

ಭಾರತದ ಸಿಸ್ಟಮ್ ಆಫ್ ಮೆಡಿಸಿನ್‌ನ ರಾಷ್ಟ್ರೀಯ ಆಯೋಗದ (NCISM) ಸದಸ್ಯರು, ಪ್ರಮುಖ ಮುಖಂ ಡರು ಅಲ್ಲದೆ ಮಾನ್ಯ ರಾಜ್ಯ ಸಭಾ ಸದಸ್ಯ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು SVYASA ಚಾನ್ಸೆಲೆರ್ ಡಾ. ಎಚ್. ಆರ್. ನಾಗೇಂದ್ರ ಭಾಗವಹಿಸಿದ್ದರು

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

SSLC Exam: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಈ ವರ್ಷ 10% ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಈ ವರ್ಷ 10% ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಕಳೆದ ಬಾರಿ ಕೊನೆ ಕ್ಷಣದಲ್ಲಿ ವೆಬ್‌ಕಾಸ್ಟಿಂಗ್ ಜಾರಿಗೆ ತಂದ ಕಾರಣ ಗ್ರೇಸ್ ಮಾರ್ಕ್ಸ್ ಕೊಡಲಾಗಿತ್ತು. ಈ ಬಾರಿ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿಯೂ ವೆಬ್‌ಕಾಸ್ಟಿಂಗ್ ಇರಲಿದೆ ಎಂದು ಸಚವರು ಹೇಳಿದ್ದಾರೆ.

Bengaluru News: ಹವಾಮಾನ ಬದಲಾವಣೆ ನಿರ್ಲಕ್ಷಿಸಲು ಸಾಧ್ಯವಿಲ್ಲ: ರಾಜೀವ್ ಗೌಡ

ಹವಾಮಾನ ಬದಲಾವಣೆ ನಿರ್ಲಕ್ಷಿಸಲು ಸಾಧ್ಯವಿಲ್ಲ: ರಾಜೀವ್ ಗೌಡ

ಭಾರತದಲ್ಲಿ ನಾವು ಹವಾಮಾನ ಬದಲಾವಣೆಗೆ ಸಂಬಂಧಿಸಿದ ವಿಷಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಹವಾಮಾನ ಸಂಬಂಧಿತ ವಿಷಯಗಳನ್ನು ಶಿಕ್ಷಣದಲ್ಲಿ ಅಳವಡಿಸಿಕೊಳ್ಳುವುದು ಸರ್ವರಿಗೂ ಸುಸ್ಥಿರ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ನಾವು ಮಾಡಬಹುದಾದ ಅತ್ಯಂತ ಶಕ್ತಿಶಾಲಿ ಹೂಡಿಕೆಯಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಯ ಸಂಶೋಧನಾ ವಿಭಾಗದ ಅಧ್ಯಕ್ಷ ಹಾಗೂ ಕರ್ನಾಟಕ ಯೋಜನಾ ಆಯೋಗದ ಮಾಜಿ ಅಧ್ಯಕ್ಷ ಡಾ.ರಾಜೀವ್ ಗೌಡ ತಿಳಿಸಿದ್ದಾರೆ.

Bengaluru News: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಜ. 24ಕ್ಕೆ ಜರ್ಮನಿಯ ಫ್ರೆಸೆನಿಯಸ್ ವಿವಿ ಬೆಂಗಳೂರಿನ ಅಬ್ರಾಡ್ ಎಜುಕೇಷನ್ ಕೌನ್ಸಿಲ್‌ಗೆ ಭೇಟಿ

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಜ. 24ಕ್ಕೆ ಜರ್ಮನಿಯ ಫ್ರೆಸೆನಿಯಸ್ ವಿವಿ ಬೆಂಗಳೂರಿನ ಅಬ್ರಾಡ್ ಎಜುಕೇಷನ್ ಕೌನ್ಸಿಲ್‌ಗೆ ಭೇಟಿ

Bengaluru News: ಜರ್ಮನಿಯ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಫ್ರೆಸೆನಿಯಸ್ ಯುನಿವರ್ಸಿಟಿ ಆಫ್ ಅಪ್ಲೈಯ್ಡ್‌ ಸೈನ್ಸ್‌, ಬೆಂಗಳೂರಿನ ಅಬ್ರಾಡ್ ಎಜುಕೇಷನ್ ಕೌನ್ಸಿಲ್ ಆ್ಯಂಡ್ ಇಮಿಗ್ರೇಷನ್ ಸರ್ವೀಸಸ್‌ಗೆ ಜ.24 ರಂದು ಭೇಟಿ ನೀಡುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ.

Education Loan: ಶಿಕ್ಷಕರ- ಉಪನ್ಯಾಸಕರ ಮಕ್ಕಳಿಗೆ ಸಿಹಿ ಸುದ್ದಿ, ಧನಸಹಾಯಕ್ಕೆ ಅರ್ಜಿ ಆಹ್ವಾನ

ಶಿಕ್ಷಕರ- ಉಪನ್ಯಾಸಕರ ಮಕ್ಕಳಿಗೆ ಸಿಹಿ ಸುದ್ದಿ, ಧನಸಹಾಯಕ್ಕೆ ಅರ್ಜಿ ಆಹ್ವಾನ

ಪ್ರೋತ್ಸಾಹ ನೀಡುವ ಮತ್ತು ವ್ಯಾಸಂಗಕ್ಕೆ ತಗಲುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಾಗೂ ಶಿಕ್ಷಕರ ಮಕ್ಕಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಸಲುವಾಗಿ ನಿಧಿಗಳ ವತಿಯಿಂದ ಈ ಸೌಲಭ್ಯ ಒದಗಿಸಲಾಗಿದೆ.

IBPS Exam Calendar: ಬ್ಯಾಂಕ್‌ ಪರೀಕ್ಷೆಯ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಟೈಮ್‌ ಟೇಬಲ್‌

IBPS Exam Calendar: ಬ್ಯಾಂಕ್‌ ಪರೀಕ್ಷೆಯ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಟೈಮ್‌ ಟೇಬಲ್‌

IBPS Exam Calendar: ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌, ಪಬ್ಲಿಕ್‌ ಸೆಕ್ಟರ್‌ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಪ್ರಕಟಿಸಿದೆ. ಆನ್‌ಲೈನ್‌ ಮೂಲಕ ನೋಂದಣಿ ನಡೆಯಲಿದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗೆ ಏಕಕಾಲಕ್ಕೆ ನೋಂದಣಿ ನಡೆಸಬೇಕು.

UGC-NET: ಗಮನಿಸಿ; ಜ. 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ

UGC-NET: ಗಮನಿಸಿ; ಜ. 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ

UGC-NET: ಜ.15ರಂದು ನಡೆಯಬೇಕಿದ್ದ ಯುಜಿಸಿ-ಎನ್​​ಇಟಿ ಪರೀಕ್ಷೆಯನ್ನು ಮುಂದೂಡಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಮಕರ ಸಂಕ್ರಾಂತಿ, ಪೊಂಗಲ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.