ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

2nd PUC Result 2026: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟವಾಗಲ್ಲ; ಮತ್ತೆ ಯಾವಾಗ ಬಿಡುಗಡೆ?

ಈ ಮೊದಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಏಪ್ರಿಲ್ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದರು. ಹೀಗಾಗಿ ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ, ಮಂಗಳವಾರ ಫಲಿತಾಂಶ ಪ್ರಕಟವಾಗುವುದಿಲ್ಲ ಎಂದು ಕೆಎಸ್‌ಇಎಬಿ ಅಧಿಕಾರಿಗಳು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ (2nd PUC Result 2026) ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಮಹತ್ವದ ಮಾಹಿತಿ ನೀಡಿದೆ. ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ, ಮಂಗಳವಾರ ಫಲಿತಾಂಶ ಬಿಡುಗಡೆಯಾಗಲ್ಲ ಎಂದು ಕೆಎಸ್‌ಇಎಬಿ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಕೆಎಸ್‌ಇಎಬಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಮಾತನಾಡಿ, ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲ್ಲ. ಯಾವಾಗ ಫಲಿತಾಂಶ ಪ್ರಕಟಿಸಬೇಕು ಎನ್ನುವ ಕುರಿತು ದಿನಾಂಕ ನಿಗದಿಪಡಿಸಿಲ್ಲ ಎಂದು ತಿಳಿಸಿದ್ದಾರೆ. ಇದರಿಂದ ಬಹಳ ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ನಿರಾಸೆಯಾಗಿದೆ.

ಈ ಮೊದಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಏಪ್ರಿಲ್ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದರು. ಹೀಗಾಗಿ ಪ್ರತಿ ವರ್ಷಕ್ಕಿಂತ ಈ ಬಾರಿ ಬೇಗ ರಿಸಲ್ಟ್ ಬರಲಿದೆ ಎಂದು ವಿದ್ಯಾರ್ಥಿಗಳು ಸಂತಸಗೊಂಡಿದ್ದರು. ಆದರೆ ಇದೀಗ ಎಕ್ಸಾಂ ಬೋರ್ಡ್ ಅಧಿಕಾರಿಗಳು ನಾಳೆ ಫಲಿತಾಂಶ ಪ್ರಕಟವಾಗುವುದಿಲ್ಲ ಎಂದು ತಿಳಿಸಿದ್ದಾರೆ.

Karnataka 1st PUC Results 2026 Topper: ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ; ಅಂಕಪಟ್ಟಿ ಡೌನ್‌ಲೋಡ್‌ಗಾಗಿ ಇಲ್ಲಿದೆ ಲಿಂಕ್‌

ದ್ವಿತೀಯ ಪಿಯುಸಿ ಪರೀಕ್ಷೆ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿತ್ತು. ರಾಜ್ಯದ ಒಟ್ಟು 1217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 7,10,363 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಪರೀಕ್ಷೆ ಮುಗಿದ ಬೆನ್ನಲ್ಲೇ ಮೌಲ್ಯಮಾಪನ ಕಾರ್ಯ ಚುರುಕಿನಿಂದ ಸಾಗಿತ್ತು. ಆದರೆ, ಈಗ ಕೊನೆಯ ಕ್ಷಣದಲ್ಲಿ ಮೌಲ್ಯಮಾಪನ ಪ್ರಕ್ರಿಯೆಯ ಸಣ್ಣ ಪುಟ್ಟ ಕೆಲಸಗಳು ಬಾಕಿ ಇರುವುದರಿಂದ ಫಲಿತಾಂಶದ ದಿನಾಂಕ ಮುಂದೂಡಲ್ಪಟ್ಟಿದ್ದು, ಇನ್ನೆರಡು ದಿನ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.