ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KSET 2025 Key Answer: ಕೆಸೆಟ್-2025ರ ಕೀ ಉತ್ತರ ಪ್ರಕಟ; ವೆಬ್‌ಸೈಟ್‌ ಲಿಂಕ್‌ ಇಲ್ಲಿದೆ

Karnataka Examinations Authority: ಕೆಸೆಟ್‌ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಮಂಗಳವಾರ ಪ್ರಕಟಿಸಲಾಗಿದೆ. ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ನ.6 ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.

ಬೆಂಗಳೂರು, ನ.4: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2025ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದು, ಕೆಸೆಟ್‌ ಕೀ (KSET 2025 Key Answer) ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕೀ ಉತ್ತರಗಳಿಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ನ.6ರಂದು ಮಧ್ಯಾಹ್ನ 3 ಗಂಟೆಯೊಳಗೆ ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್‌ ಮೂಲಕ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಕೆಸೆಟ್‌ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಮಂಗಳವಾರ ಪ್ರಕಟಿಸಲಾಗಿದೆ. ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ನ.6 ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ವಿಷಯ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು ಪಿಡಿಎಫ್‌ ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ 50 ರೂ. ಪಾವತಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ, ಅಪೂರ್ಣ/ಆಧಾರರಹಿತವಾಗಿರುವ ಅಥವಾ ಶುಲ್ಕ ಪಾವತಿಸದೇ ಇರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಕೆಸೆಟ್-2025ರ ಕೀ ಉತ್ತರಗಳಿಗಾಗಿ ಈ ಲಿಂಕ್‌ https://cetonline.karnataka.gov.in/kea/kset2025 ಕ್ಲಿಕ್‌ ಮಾಡಿ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯು ನ.2ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆದಿತ್ತು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದರು.

ಈ ಸುದ್ದಿಯನ್ನೂ ಓದಿ | KEA Recruitment 2025: ವಿವಿಧ ಇಲಾಖೆಗಳ 708 ಹುದ್ದೆ ನೇಮಕಾತಿ; ಅರ್ಜಿ ಸಲ್ಲಿಕೆ ಅವಧಿ ನ.14ರವರೆಗೆ ವಿಸ್ತರಣೆ

ಒಟ್ಟು 34 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.34 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ 1.21 ಲಕ್ಷ (ಶೇ.90) ಮಂದಿ ಹಾಜರಾಗಿದ್ದರು. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆದಿತ್ತು.

ಕೆಸೆಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಪದವಿ ಕಾಲೇಜು/ ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕ ಹಾಗೂ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ವಿಶೇಷ ಚೇತನ, ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಕನಿಷ್ಠ 50 ಅಂಕ ಪಡೆದಿರಬೇಕು. ಇನ್ನು ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು, ಸಾಮಾನ್ಯ ವರ್ಗದ ಅಭ್ಯರ್ಥಿಗಳು ಎರಡೂ ಪತ್ರಿಕೆಗಳಲ್ಲಿ ಕನಿಷ್ಠ ಶೇ. 40 ಅಂಕಗಳು ಮತ್ತು ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ವಿಶೇಷ ಚೇತನ, ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಕನಿಷ್ಠ ಶೇ.35 ಒಟ್ಟು ಅಂಕಗಳು ಅಗತ್ಯವಿದೆ.