ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

2nd PUC Exam-2: ದ್ವಿತೀಯ ಪಿಯುಸಿ ಪರೀಕ್ಷೆ-2ರ ನೋಂದಣಿಗೆ ಏಪ್ರಿಲ್‌ 17 ಕೊನೆಯ ದಿನ; ಎಕ್ಸಾಂ ಯಾವಾಗ?

2nd puc exam 2 registration: ಕಾಲೇಜಿನ ಪ್ರಾಂಶುಪಾಲರುಗಳಿಗೆ 2026ರಲ್ಲಿ ಮೊದಲನೆ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ಹಾಗೂ ಕಾರಣಾಂತರಗಳಿಂದ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳನ್ನು ತಮ್ಮ PU EXAM PORTAL ಲಾಗಿನ್ ಮುಖಾಂತರ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ (2nd PUC Exam-2) ಸಂಬಂಧಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಮಾಹಿತಿ ನೀಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ನೋಂದಣಿಗೆ ಏಪ್ರಿಲ್ 9ರಿಂದ 17ರವರೆಗೆ ಅವಕಾಶ ಕಲ್ಪಿಸಲಾಗಿದ್ದು, 2026ರಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳಾಗಿ (REGULAR FRESH) ನೋಂದಾಯಿಸಿಕೊಂಡು ಮತ್ತು ಮೊದಲನೆ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ (NOT COMPLETED) ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೆ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದೆ.

ಆನ್‌ಲೈನ್ ಮೂಲಕ https://dpue-exam.karnataka.gov.in/testrr22_01dpue/Login ನೋಂದಾಯಿಸಿಕೊಳ್ಳುವುದು ಅಥವಾ ಅಭ್ಯರ್ಥಿಗಳು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ PU EXAM PORTAL ಪರೀಕ್ಷೆಗೆ ನೋಂದಾಯಿಸಿಕೊಳ್ಳಬೇಕು. ಸಂಬಂಧಿಸಿದ ಪ್ರಾಂಶುಪಾಲರಿಗೆ 2026ರಲ್ಲಿ ಮೊದಲನೆ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ಹಾಗೂ ಕಾರಣಾಂತರಗಳಿಂದ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳನ್ನು ತಮ್ಮ PU EXAM PORTAL ಲಾಗಿನ್ ಮುಖಾಂತರ ನೋಂದಣಿ ಮಾಡಲು ಅವಕಾಶ ನೀಡಲಾಗಿದೆ.

2026 ರೆಗ್ಯುಲ‌ರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊದಲನೆ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೆ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪರೀಕ್ಷೆ-2ಕ್ಕೆ ನೋಂದಾಯಿಸಬೇಕು ಎಂದು ಪರೀಕಾ ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ ನಿಗದಿತ ಸಮಯದಲ್ಲಿ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರುಗಳ ಲಾಗಿನ್‌ನಲ್ಲಿ ಲಭ್ಯವಾಗಲಿದೆ.

2nd PUC District Wise Result 2026: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್; ಜಿಲ್ಲಾವಾರು ಪಟ್ಟಿ ಇಲ್ಲಿದೆ

ಏಪ್ರಿಲ್ 30ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2

ದ್ವಿತೀಯ ಪಿಯುಸಿ ಪರೀಕ್ಷೆ-2ರ ದಿನಾಂಕಗಳನ್ನು ಮರುನಿಗದಿಗೊಳಿಸಲಾಗಿದ್ದು, ಪರೀಕ್ಷೆಯು ಏಪ್ರಿಲ್ 30ರಿಂದ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳು, ಮಂಡಲಿಯ ಜಾಲತಾಣದ ಪಿಯುಸಿ ವಿದ್ಯಾರ್ಥಿ ಅಂಕಣದಲ್ಲಿ ಲಭ್ಯಗೊಳಿಸಲಾದ ಪ್ರಶ್ನೆ ಕೋಠಿ, ಮಾದರಿ ಪ್ರಶ್ನೆ ಪತ್ರಿಕೆಗಳನ್ವಯ ಪರೀಕ್ಷೆ-2ಕ್ಕೆ ಯಾವುದೇ ಆತಂಕಗಳಿಲ್ಲದೆ ಹಾಗೂ ಶಾಂತ ಚಿತ್ತತೆಯಿಂದ ಸಿದ್ಧತೆಯನ್ನು ಮಾಡಿಕೊಂಡು ಪರೀಕ್ಷೆಗೆ ಹಾಜರಾಗಲು ಮಂಡಳಿ ಕೋರಿದೆ.