ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dr Na Someshwara: ವಿದ್ಯಾರ್ಥಿಗಳು ಶಿಸ್ತು, ಏಕಾಗ್ರತೆಯಿಂದ ಅಭ್ಯಾಸ ಮಾಡಿದಲ್ಲಿ ಉನ್ನತ ವ್ಯಕ್ತಿತ್ವ ಹೊಂದಲು ಸಾಧ್ಯ: ಡಾ.ನಾ. ಸೋಮೇಶ್ವರ

Dr Na Someshwara: ಶಿಕ್ಷಣ ಎಂಬುದು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವಂತಿರಬೇಕು. ಶಿಕ್ಷಕರು ಪಠ್ಯದ ಜತೆಗೆ ವಿದ್ಯಾರ್ಥಿಗಳಿಗೆ ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಹೀಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಕ್ವಿಜ್ ಮಾಸ್ಟರ್ ಖ್ಯಾತಿಯ ಡಾ.ನಾ. ಸೋಮೇಶ್ವರ ತಿಳಿಸಿದ್ದಾರೆ.

ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ಕೊಡಿ: ಡಾ.ನಾ. ಸೋಮೇಶ್ವರ

Profile Siddalinga Swamy May 9, 2025 1:09 AM

ಕೆ.ಆರ್.ಪುರ: ವಿದ್ಯಾರ್ಥಿಗಳು ಹದಿಹರೆಯದಲ್ಲಿ ಶಿಸ್ತು, ಸಂಯಮ, ತಾಳ್ಮೆ ಬೆಳೆಸಿಕೊಂಡು ಏಕಾಗ್ರತೆಯಿಂದ ಅಭ್ಯಾಸ ಮಾಡಿದಲ್ಲಿ ಉನ್ನತ ವ್ಯಕ್ತಿತ್ವ ಹೊಂದಲು ಸಾಧ್ಯ ಎಂದು ಕ್ವಿಜ್ ಮಾಸ್ಟರ್ ಖ್ಯಾತಿಯ ಡಾ.ನಾ. ಸೋಮೇಶ್ವರ ತಿಳಿಸಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಕ್ರೀಡಾ ಎನ್.ಎಸ್.ಎಸ್, ಎನ್.ಸಿ.ಸಿ, ರೆಡ್ ಕ್ರಾಸ್, ಭಾರತ್ ಅಂಡ್ ಗೈಡ್ಸ್ ಮತ್ತು ಮಹಿಳಾ ಸಬಲೀಕರಣ ಕೋಶ ಮತ್ತು ಇತರೆ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸಿರಿ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಶಿಕ್ಷಣ ಎಂಬುದು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವಂತಿರಬೇಕು. ಶಿಕ್ಷಕರು ಪಠ್ಯದ ಜತೆಗೆ ವಿದ್ಯಾರ್ಥಿಗಳಿಗೆ ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಹೀಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಾದೇಶಿಕ ಕಚೇರಿ ಜಂಟಿ ಆಯುಕ್ತ ಡಾ. ರಾಮಕೃಷ್ಣಾರೆಡ್ಡಿ ಕೆ. ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವುದರೊಂದಿಗೆ ದೇಶ ಪ್ರೇಮದ ಕಿಚ್ಚು ಹಚ್ಚಿಕೊಂಡು ಸದೃಢ ಭಾರತ ನಿರ್ಮಾಣಕ್ಕೆ ಕಟಿಬದ್ಧರಾಗಬೇಕು ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | BOB Recruitment 2025: 10ನೇ ತರಗತಿ ಪಾಸಾದವರಿಗೆ ಬಂಪರ್‌ ಚಾನ್ಸ್‌; ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ ಬರೋಬ್ಬರಿ 500 ಹುದ್ದೆ

ಪ್ರಾಂಶುಪಾಲ ಡಾ. ಪ್ರತಿಭಾ ಪಾರ್ಶ್ವನಾಥ್ ಮಾತನಾಡಿ, ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಯುವಜನತೆಯಲ್ಲಿ ಸಂಸ್ಕಾರಯುತ ಶಿಕ್ಷಣ ಅಗತ್ಯವಿದೆ. ಗುರುವಿನ ಮಾರ್ಗದರ್ಶನದಿಂದ ಭವಿಷ್ಯ ಉಜ್ವಲಗೊಳ್ಳುತ್ತದೆ, ಆದರ್ಶ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.