ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಶ್ಚಿಮಬಂಗಾಳದಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ

ವಿಧಾನ ಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ಬಳಿಕ ಪಶ್ಚಿಮ ಬಂಗಾಳ ಉದ್ವಿಗ್ನವಾಗಿದೆ. ಅಲ್ಲಲ್ಲಿ ಘರ್ಷಣೆಗಳು ನಡೆಯುತ್ತಿವೆ. ಇದೀಗ ಗಸ್ತು ತಿರುಗುತ್ತಿದ್ದ ಮೂವರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆದಿದೆ. ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಗಸ್ತು ತಿರುಗುತ್ತಿದ್ಧ ಮೂವರು ಪೊಲೀಸರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಪಶ್ಚಿಮಬಂಗಾಳದಲ್ಲಿ  ಭದ್ರತಾ ಸಿಬ್ಬಂದಿ ಮೇಲೆ ದಾಳಿ

ಸಂಗ್ರಹ ಚಿತ್ರ -

ಕೋಲ್ಕತ್ತಾ: ಪಶ್ಚಿಮ ಬಂಗಾಳ (west bengal) ವಿಧಾನ ಸಭಾ ಚುನಾವಣೆಯಲ್ಲಿ (Assembly elections) ಬಿಜೆಪಿ (BJP) ಭರ್ಜರಿ ಗೆಲುವು (election result 2026) ದಾಖಲಿಸಿದ ಮೇಲೆ ರಾಜ್ಯಾದ್ಯಂತ ಉದ್ವಿಗ್ನತೆಯ ವಾತಾವರಣ ನಿರ್ಮಾಣವಾಗಿದೆ. ಹಲವೆಡೆ ಘರ್ಷಣೆಗಳು ವರದಿಯಾಗುತ್ತಿವೆ. ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಮಂಗಳವಾರ ತಡರಾತ್ರಿ ಗಸ್ತು ತಿರುಗುತ್ತಿದ್ಧ ಮೂವರು ಪೊಲೀಸರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವುದು ವರದಿಯಾಗಿದೆ. ಇದರಿಂದ ಗಾಯಗೊಂಡಿರುವ ಭದ್ರತಾ ಸಿಬ್ಬಂದಿಯನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿರುವ ಹಿಂಸಾಚಾರದಲ್ಲಿ ಗಸ್ತು ತಿರುಗುತ್ತಿದ್ದ ಮೂವರು ಭದ್ರತಾ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದು ಈಗ ಅಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಟಿವಿಕೆ ಪಕ್ಷದಿಂದ ಗೆದ್ದು ತಮಿಳುನಾಡಿನಲ್ಲಿ MLA ಆದ ಕನ್ನಡಿಗ; ಯಾರೀತ ಹಿನ್ನೆಲೆಯೇನು?

ಸಂದೇಶ್ ಖಾಲಿಯ ನಜತ್ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಬೇರಿಯಾ-ಅಗರ್ಹತಿ ಗ್ರಾಮ ಪಂಚಾಯತ್‌ನ ವಾರ್ಡ್ ಸಂಖ್ಯೆ 14ರ ಬಮಂಘೇರಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ. ಕೇಂದ್ರ ಭದ್ರತಾ ಪಡೆಗಳೊಂದಿಗೆ ಪೊಲೀಸ್ ತಂಡವು ನಿಯಮಿತ ಗಸ್ತು ತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಭದ್ರತಾ ಸಿಬ್ಬಂದಿಯನ್ನು ತಕ್ಷಣವೇ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾದ ಮೇಲೆ ಅಲ್ಲಲ್ಲಿ ಹಿಂಸಾಚಾರ ನಡೆದಿದ್ದು, ಅಲ್ಲಲ್ಲಿ ಅಶಾಂತಿ ಮತ್ತು ಘರ್ಷಣೆಗಳು ಹೆಚ್ಚಾಗಿವೆ. ಇದನ್ನು ತಡೆಗಟ್ಟಲು ಪ್ರಮುಖ ಪ್ರಮುಖ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಲಾಗಿದೆ.

ಕೋಲ್ಕತ್ತಾದ ನ್ಯೂ ಮಾರ್ಕೆಟ್ ಪ್ರದೇಶ ಮತ್ತು ಟಿಎಂಸಿ ಪಕ್ಷದ ಕಚೇರಿಯ ಮೇಲೆ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಬುಲ್ಡೋಜರ್‌ ಮೂಲಕ ದಾಳಿ ನಡೆಸಿ ಧ್ವಂಸ ಮಾಡಿದ್ದಾರೆ ಎಂದು ಟಿಎಂಸಿ ಆರೋಪಿಸಿದ್ದು, ಈ ಕುರಿತು ವಿಡಿಯೋವನ್ನು ಕೂಡ ಬಿಡುಗಡೆ ಮಾಡಿದೆ.
ಪಕ್ಷದ ಕಚೇರಿ ಮೇಲೆ ಬುಲ್ಡೋಜರ್ ದಾಳಿ: ಬಿಜೆಪಿ ವಿರುದ್ಧ ಟಿಎಂಸಿ ಆರೋಪ

ಅಲ್ಲದೇ ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಚುನಾವಣಾ ಬಳಿಕ ನಡೆದಿರುವ ಹಿಂಸಾಚಾರದ ಬಗ್ಗೆ ತಿಳಿಯಲು 10 ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸುವುದಾಗಿ . ಹೇಳಿದ್ದು,ಮತ ಎಣಿಕೆ, ಮತದಾನದ ವೇಳೆ ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಬಿಜೆಪಿಯು ಉದ್ದೇಶಿತ ಹಿಂಸಾಚಾರವನ್ನು ಸಂಘಟಿಸುತ್ತಿದೆ ಎಂದು ಆರೋಪಿಸಿದ್ದಾರೆ.