Atishi Marlena: ದೆಹಲಿ ಚುನಾವಣೆಯಲ್ಲಿ ಮುಗ್ಗರಿಸಿದ ಆಪ್: ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ!
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್ ಹೀನಾಯವಾಗಿ ಸೋಲು ಕಂಡ ಬೆನ್ನಲ್ಲೇ ಅತಿಶಿ ಇಂದು (ಫೆ.9) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅತಿಶಿ ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ವಿ.ಕೆ. ಸಕ್ಕೇನಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ಒಂದು ದಶಕ ಅಧಿಪತ್ಯ ಸಾಧಿಸಿದ್ದ ಆಮ್ ಆದ್ಮಿ ಪಕ್ಷದ ಆಡಳಿತ ಇದೀಗ ಅಂತ್ಯವಾಗಿದೆ.

Atishi Marlena

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ(Delhi Election ಆಪ್ ಹೀನಾಯವಾಗಿ ಸೋಲು ಕಂಡ ಬೆನ್ನಲ್ಲೇ ಅತಿಶಿ ಮಾರ್ಲೆನಾ(Atishi Marlena) ಇಂದು (ಫೆ.9) ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅತಿಶಿ ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ವಿ.ಕೆ. ಸಕ್ಕೇನಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ಒಂದು ದಶಕ ಅಧಿಪತ್ಯ ಸಾಧಿಸಿದ್ದ ಆಮ್ ಆದ್ಮಿ ಪಕ್ಷದ ಆಡಳಿತ ಇದೀಗ ಅಂತ್ಯವಾಗಿದೆ. ಅರವಿಂದ ಕೇಜ್ರಿವಾಲ್ ಹಗರಣದ ಆರೋಪದ ಮೇಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅತಿಶಿ ದೆಹಲಿ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು.
ಬಹು ನಿರೀಕ್ಷಿತ ಮತ್ತು ರಾಜಕೀಯ ಪಡಸಾಲೆಯಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ದೆಹಲಿ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಿದ್ದಿದ್ದು, ಬಿಜೆಪಿ ಐತಿಹಾಸಿಕ ಗೆಲುವನ್ನು ಸಾಧಿಸುವ ಮೂಲಕ 27 ವರ್ಷಗಳ ನಂತರ ಗದ್ದುಗೆ ಏರಿದೆ. ಆಪ್‌ನ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದೆ. ಸ್ವತಃ ಕೇಜ್ರಿವಾಲ್ ತಮ್ಮ ತವರು ಕ್ಷೇತ್ರದಲ್ಲಿಯೇ ಸೋತಿದ್ದಾರೆ. ಅತಿಶಿ ಭಾರೀ ಅಂತರದ ಮತಗಳಿಂದ ಗೆಲುವು ಸಾಧಿಸಿದ್ದರೂ ತಮ್ಮ ಪಕ್ಷ ಬಹುಮತವನ್ನು ಪಡೆಯದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
#DelhiElectionResult : Atishi submits her Resignation from CM 🔥😅 #AtishiMarlena
— Ankita (@Cric_gal) February 9, 2025
pic.twitter.com/2u6DX48KBC
ಸುಷ್ಮಾ ಸ್ವರಾಜ್ ಮತ್ತು ಶೀಲಾ ದೀಕ್ಷಿತ್ ನಂತರ ದಿಲ್ಲಿಯ ಸಿಎಂ ಸ್ಥಾನಕ್ಕೇರಿದ ಅತಿಶಿ ಮೂರನೇ ಮಹಿಳಾ ನಾಯಕಿಯಾಗಿ ಹೊರ ಹೊಮ್ಮಿದ್ದರು. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಚುಕ್ಕಾಣಿ ಹಿಡಿದಿದ್ದ ಅತಿಶಿ ಕೇವಲ ನಾಲ್ಕೂವರೆ ತಿಂಗಳು ಆಡಳಿತ ನಡೆಸಿದ್ದಾರೆ.
ಈ ಸುದ್ದಿಯನ್ನೂ ಓದಿ:Swati Maliwal: ಕೇಜ್ರಿವಾಲ್‌ಗೆ ಸೋಲು: ದ್ರೌಪದಿ ವಸ್ತ್ರಾಪಹರಣದ ಪೋಸ್ಟ್ ಶೇರ್ ಮಾಡಿದ ಸ್ವಾತಿ ಮಲಿವಾಲ್!
ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋತ ನಂತರ ಅತಿಶಿ ಮಾನಾಡಿದ್ದರು. ಆಪ್ ಪರವಾಗಿ ದೃಢವಾಗಿ ನಿಂತ ಪಕ್ಷದ ಕಾರ್ಯಕರ್ತರು ಹಾಗೂ ದಿಲ್ಲಿಯ ಜನರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ನಾನು ವೈಯಕ್ತಿಕವಾಗಿ ಗೆದ್ದರೂ ಸಂಭ್ರಮಿಸದಂತಹ ಸ್ಥಿತಿ ನಿರ್ಮಾಣವಾಗಿದೆ. ಆಪ್ ಈಗ ಹಿನ್ನಡೆ ಅನುಭವಿಸಿದರೂ ದಿಲ್ಲಿ ಹಾಗೂ ದೇಶದ ಜನರ ಪರವಾಗಿ ಹೋರಾಡುತ್ತೇವೆ. ಬಿಜೆಪಿಯ ಸರ್ವಾಧಿಕಾರದ ವಿರುದ್ಧವೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದ್ದರು.
ಕಲ್ಕಾಜಿ ಕ್ಷೇತ್ರದಿಂದ ಅತಿಶಿ ಗೆಲುವು!
ಆಪ್ ಪಕ್ಷದ ಪ್ರಭಾವಿ ನಾಯಕರೆಲ್ಲರೂ ಹೀನಾಯವಾಗಿ ಸೋಲು ಕಂಡಿದ್ದಾರೆ. ಸ್ವತಃ ಅರವಿಂದ ಕೇಜ್ರಿವಾಲ್ ಕೂಡ ತಮ್ಮ ತವರು ಕ್ಷೇತ್ರದಲ್ಲಿಯೇ ಸೋಲು ಅನುಭವಿಸಿದರು. ಒಂದು ಹಂತದಲ್ಲಿ ಸಿಎಂ ಅತಿಶಿ ಕೂಡ ಸೋಲುಣ್ಣುತ್ತಾರೆ ಎನ್ನಲಾಗಿತ್ತು. ಆದರೆ ಮತದಾರರು ಅತಿಶಿ ಅವರನ್ನು ಕಲ್ಕಾಜಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಿಸಿದ್ದಾರೆ. ಅತಿಶಿ, ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರನ್ನು ಸೋಲಿಸಿದ್ದಾರೆ. ಅತಿಶಿ ಸ್ಪರ್ಧಿಸಿದ್ದ ಕಲ್ಕಾಜಿ ವಿಧಾನಸಭಾ ಕ್ಷೇತ್ರದಲ್ಲಿ ಬರೋಬ್ಬರಿ 32 ವರ್ಷಗಳಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಈ ಕ್ಷೇತ್ರದಲ್ಲಿ ಬಿಜೆಪಿ ಸಾಕಷ್ಟು ಚುನಾವಣಾ ಪ್ರಚಾರ ನಡೆಸಿತ್ತು. ಅತಿತಿಶಿ ಕಲ್ಕಾಜಿ ಕೇತ್ರದಲ್ಲಿ 18,994 ಸಾವಿರ ಮತಗಳ ಅಂತರದಲ್ಲಿ ದಾಖಲೆಯ ವಿಜಯ ಸಾಧಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಅತಿಶಿ ಇನ್ನು ಶಾಸಕಿಯಾಗಿ ಮಾತ್ರ ಉಳಿದುಕೊಳ್ಳಲಿದ್ದಾರೆ.