Oath ceremony : ದೆಹಲಿಯ ನೂತನ ಸಿಎಂ ಪ್ರಮಾಣವಚನ ಯಾವಾಗ? ಇಲ್ಲಿದೆ ಮಾಹಿತಿ
ಮುಖ್ಯ ಮಂತ್ರಿ ಪದಗ್ರಹಣ ಸಮಾರಂಭ ಕಾರ್ಯಕ್ರಮ ಕೊಂಚ ವಿಳಂಬವಾಗಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸಕ್ಕೆ ತೆರಳಲಿದ್ದು, ಅವರು ಭಾರತಕ್ಕೆ ಹಿಂದಿರುಗುವ ವರೆಗೂ ದೆಹಲಿ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ನಡೆಯುವುದು ಬಹುತೇಕ ಅನುಮಾನ.

Oath ceremony

ನವದೆಹಲಿ: ದೆಹಲಿಯಲ್ಲಿ ಚುನಾವಣಾ (Delhi Election 2025) ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಬಿಜೆಪಿ ಭರ್ಜರಿ ಜಯ ಸಾಧಿಸಿದೆ. 27 ವರ್ಷಗಳ ಬಳಿಕ ದೆಹಲಿಯನ್ನು ಬಿಜೆಪಿ ಏರಲಿದೆ. ಸದ್ಯ ದೆಹಲಿಯ ಮುಖ್ಯಮಂತ್ರಿ (Delhi CM) ಯಾರೆಂಬ ಚರ್ಚೆ ನಡೆಯುತ್ತಿದ್ದು, ಹಲವರು ರೇಸ್‌ನಲ್ಲಿದ್ದಾರೆ. ಮುಖ್ಯ ಮಂತ್ರಿ ಪದಗ್ರಹಣ ಸಮಾರಂಭ (Oath ceremony) ಕಾರ್ಯಕ್ರಮ ಕೊಂಚ ವಿಳಂಬವಾಗಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಿದೇಶ ಪ್ರವಾಸಕ್ಕೆ ತೆರಳಲಿದ್ದು, ಅವರು ಭಾರತಕ್ಕೆ ಹಿಂದಿರುಗುವ ವರೆಗೂ ದೆಹಲಿ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ನಡೆಯುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ.
ಪ್ರಧಾನಿ ಮೋದಿ ಫೆಬ್ರವರಿ 12 ಮತ್ತು 13 ರಂದು ಅಮೆರಿಕ ಭೇಟಿ ನೀಡಲಿದ್ದು, ಎರಡನೇ ಬಾರಿಗೆ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ಮೇಲೆ ಮೊದಲ ಬಾರಿಗೆ ಮೋದಿ ಶ್ವೇತಭವನಕ್ಕೆ ತೆರಳಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.
ಮೂಲಗಳ ಪ್ರಕಾರ, ಬಿಜೆಪಿಯು ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಆಯೋಜಿಸಲಿದ್ದು, ಇದರಲ್ಲಿ ಎಲ್ಲಾ ಉನ್ನತ ಎನ್‌ಡಿಎ ನಾಯಕರು ಮತ್ತು ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು ಎಂದು ತಿಳಿದು ಬಂದಿದೆ. ದೆಹಲಿ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ, ಮುಖ್ಯಮಂತ್ರಿಯ ಹೆಸರಿಗೆ ರಾಷ್ಟ್ರಪತಿಗಳ ಅನುಮೋದನೆ ಅಗತ್ಯವಿದೆ. ಪಕ್ಷವು ಮುಖ್ಯಮಂತ್ರಿ ಹೆಸರನ್ನು ನಿರ್ಧರಿಸಿದ ನಂತರ, ರಾಷ್ಟ್ರಪತಿಗಳು ಲೆಫ್ಟಿನೆಂಟ್ ಗವರ್ನರ್ ಸಲಹೆಯ ಮೇರೆಗೆ ಮುಖ್ಯಮಂತ್ರಿಯನ್ನು ನೇಮಿಸುತ್ತಾರೆ. ಈ ಪ್ರಕ್ರಿಯೆಯು 2 ರಿಂದ 3 ದಿನಗಳನ್ನು ತೆಗೆದುಕೊಳ್ಳಬಹುದು.
ಈ ಸುದ್ದಿಯನ್ನೂ ಓದಿ: Delhi Election 2025: ದೆಹಲಿ ಚುನಾವಣೆ: ಕಾಂಗ್ರೆಸ್ ʼಶೂನ್ಯʼ ಸಾಧನೆ-ʼಗ್ಯಾರಂಟಿʼ ಫ್ಲಾಪ್!
ಸಿಎಂ ಯಾರಾಗಬಹುದು?
27 ವರ್ಷಗಳ ನಂತರ ದೆಹಲಿಯಲ್ಲಿ ಕಮಲ ಅರಳಿದ್ದು, ಹಲವರು ಸಿಎಂ ರೇಸ್‌ನಲ್ಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರನ್ನು ನವದೆಹಲಿ ಕ್ಷೇತ್ರದಿಂದ ಸೋಲಿಸಿದ ಪರ್ವೇಶ್ ವರ್ಮಾ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಸಂಸದ ಮನೋಜ್ ತಿವಾರಿ ಅವರನ್ನು ದೆಹಲಿ ಮುಖ್ಯಮಂತ್ರಿಯನ್ನಾಗಿ ಮಾಡುವ ಮೂಲಕ ಪ್ರಧಾನಿ ಮೋದಿ ಪೂರ್ವಾಂಚಲ್‌ನ ಮತಬ್ಯಾಂಕ್ ಅನ್ನು ಸೆಳೆಯಲು ಪ್ರಯತ್ನಿಸಬಹುದು ಎಂದು ಕೂಡ ಹೇಳಲಾಗುತ್ತಿದೆ. ಇನ್ನು ಬಾನ್ಸುರಿ ಸ್ವರಾಜ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದು, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿಯಾಗಿದ್ದಾರೆ.