#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Delhi Election Result: ಭ್ರಷ್ಟ ಮಾಜಿ ಸಿಎಂ ಕೇಜ್ರಿವಾಲ್‌ ಮುಖವಾಡ ಕಳಚಿದೆ: ಬಿ.ವೈ.ವಿಜಯೇಂದ್ರ

Delhi Election Result: ದೆಹಲಿ ಚುನಾವಣೆ ಫಲಿತಾಂಶ ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದೀಜಿ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಸಂದೇಶವನ್ನು ದೆಹಲಿಯ ಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಪಸರಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಭ್ರಷ್ಟ ಮಾಜಿ ಸಿಎಂ ಕೇಜ್ರಿವಾಲ್‌ ಮುಖವಾಡ ಕಳಚಿದೆ: ಬಿ.ವೈ.ವಿಜಯೇಂದ್ರ

Profile Prabhakara R Feb 8, 2025 3:03 PM

ಬೆಂಗಳೂರು: 27 ವರ್ಷಗಳ ಬಳಿಕ ಬಿಜೆಪಿಗೆ ದೆಹಲಿಯಲ್ಲಿ ಅಭೂತಪೂರ್ವ ಗೆಲುವು (Delhi Election Result) ದೊರೆತಿದೆ. ಈ ಮೂಲಕ ಭ್ರಷ್ಟ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಮುಖವಾಡ ಕಳಚಿದೆ. ಆಮ್ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ. ದೆಹಲಿಯ ಬಿಜೆಪಿ ಪಕ್ಷದ ಎಲ್ಲಾ ಮುಖಂಡರಿಗೆ, ಪಕ್ಷದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನೆಗಳು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಸಂಭ್ರಮಾಚರಣೆ ನಡೆಯಿತು. ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿದ್ದಾರೆ.

ದೆಹಲಿ ಚುನಾವಣೆ ಫಲಿತಾಂಶ ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದೀಜಿ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಸಂದೇಶವನ್ನು ದೆಹಲಿಯ ಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಪಸರಿಸಿದ್ದಾರೆ. ಬಿಜೆಪಿಗೆ ದಾಖಲೆಯ ದಿಗ್ವಿಜಯ ದೊರಕಿಸಿಕೊಟ್ಟ ದೆಹಲಿಯ ಮತದಾರರಿಗೆ ಕೃತಜ್ಞತೆ ಸಲ್ಲಿಸಿ, ಮಾನ್ಯ ಮೋದೀಜಿ ಅವರನ್ನು ಕರ್ನಾಟಕದ ಜನತೆಯ ಪರವಾಗಿ ಅಭಿನಂದಿಸುವೆ ಎಂದರು.

ವಿಕಸಿತ ಭಾರತದ ಸಂಕಲ್ಪ ತೊಟ್ಟು ದೇಶವನ್ನು ಜಾಗತಿಕ ಮಟ್ಟದಲ್ಲಿ ಬಲಿಷ್ಠಗೊಳಿಸಲು ಯೋಜನೆ ರೂಪಿಸುತ್ತಿರುವ ಪ್ರಧಾನಿಯವರಿಗೆ ದೇಶದ ರಾಜಧಾನಿಯ ಗೆಲುವು ಭೀಮ ಬಲವನ್ನು ತಂದು ಕೊಟ್ಟಿದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಹಾಗೂ ಗೃಹ ಸಚಿವರಾದ ಅಮಿತ್‌ ಶಾ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಹೆಗ್ಗಳಿಕೆಯ ವಿಜಯ ಸಾಧಿಸಿದೆ.



ಭಾರತೀಯ ಜನತಾ ಪಾರ್ಟಿ ದೇಶಭಕ್ತಿ ಹಾಗೂ ರಾಷ್ಟ್ರ ಕಟ್ಟುವ ಲಕ್ಷಾಂತರ ಕಾರ್ಯಕರ್ತರನ್ನೊಳಗೊಂಡ ವಿಶ್ವ ದಾಖಲೆ ನಿರ್ಮಿಸಿರುವ ರಾಜಕೀಯ ಪಕ್ಷವಾಗಿದೆ. ಬಿಜೆಪಿಯ ವಿರುದ್ಧ ಸುಳ್ಳು ಅಪಪ್ರಚಾರಗಳನ್ನು ನಡೆಸಿ ತಾತ್ಕಾಲಿಕ ಗೆಲುವು ಸಾಧಿಸಬಹುದೇ ಹೊರತು ಪಕ್ಷ ಸಿದ್ಧಾಂತದೊಂದಿಗೆ ಸೆಣಸಿ ಬಿಜೆಪಿ ಮಣಿಸಲು ಸಾಧ್ಯವಿಲ್ಲ ಎನ್ನುವುದನ್ನು ದೆಹಲಿಯ ಫಲಿತಾಂಶ ತೋರಿಸಿಕೊಟ್ಟಿದೆ. ಭವಿಷ್ಯತ್ತಿನಲ್ಲಿ ಇದು ಕರ್ನಾಟಕದಲ್ಲೂ ಪ್ರತಿಫಲಿಸಲಿದೆ ಎಂದರು.



ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಬಿಜೆಪಿ ಮಡಿಲಿಗೆ ಸಮರ್ಪಿಸಿರುವ ದೆಹಲಿಯ ಜನತೆಯ ಆಶೋತ್ತರಗಳನ್ನು ಈಡೇರಿಸಲು ಪ್ರಧಾನಿ ಶ್ರೀ ನರೇಂದ್ರ ಮೋದೀಜಿ ಅವರ ಮಾರ್ಗದರ್ಶನದಲ್ಲಿ ನೂತನ ಸರಕಾರ ಕಟಿಬದ್ಧವಾಗಿ ಕೆಲಸ ಮಾಡಲಿದೆ ಎನ್ನುವುದು ದೆಹಲಿ ಚುನಾವಣೆಗಾಗಿ ಶ್ರಮಿಸಿದ ಪ್ರತಿಯೊಬ್ಬ ಪಕ್ಷ ಪ್ರಮುಖರು ಹಾಗೂ ಕಾರ್ಯಕರ್ತರ ಅಭಯವಾಗಿದೆ. ಈ ಚುನಾವಣೆ ಬಿಜೆಪಿಯ ಕಾರ್ಯಕರ್ತರು ಹಾಗೂ ದೆಹಲಿಯ ಜನತೆಯ ಚಾರಿತ್ರಿಕ ಜಯವಾಗಿದೆ ಎಂದರು.

ಈ ಸುದ್ದಿಯನ್ನೂ ಓದಿ | Delhi Election Results 2025: ದಿಲ್ಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಬಿಜೆಪಿಯ ಪರ್ವೇಶ್‌ ವರ್ಮಾಗೆ ಜಯ; ಯಾರಿವರು? ಹಿನ್ನೆಲೆ ಏನು?



ವಿಪಕ್ಷ ನಾಯಕ ಆರ್‌.ಅಶೋಕ್‌ ಮಾತನಾಡಿ, 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಗೆಲುವು ದಾಖಲಿಸಿರುವುದು ರಾಷ್ಟ್ರಕ್ಕೆ ಒಂದು ಸಂದೇಶ ನೀಡಿದಂತಾಗಿದೆ. ಪ್ರಧಾನಿ ಮೋದಿ ಅವರ ವರ್ಚಸ್ಸು, ಆಡಳಿತದ ಕಾರ್ಯವೈಖರಿ, ಜನಪರ ಬಜೆಟ್ ಮಂಡನೆ ಇವೆಲ್ಲವೂ ದೆಹಲಿ ಮತದಾರರ ಮನಸ್ಸು ಗೆಲ್ಲಲು ಸಹಕರಿಸಿದೆ. ದೆಹಲಿಯಲ್ಲಿ ಆಪ್, ಕಾಂಗ್ರೆಸ್ ಪಕ್ಷಗಳು ಉಚಿತ ಗ್ಯಾರಂಟಿಗಳನ್ನು ಘೋಷಿಸಿದರೂ ದೆಹಲಿಯ ಮತದಾರರು ಅವರನ್ನು ಮಕಾಡೆ ಮಲಗಿಸಿದ್ದಾರೆ ಎಂದು ಹೇಳಿದರು.