Delhi Election 2025: ಚುನಾವಣೆಗೆ ಸಜ್ಜಾದ ದೆಹಲಿ; ಮೂರನೇ ಬಾರಿಗೆ ಹ್ಯಾಟ್ರಿಕ್ ಬಾರಿಸುತ್ತಾ ಆಪ್?
ಬುಧವಾರ ದೆಹಲಿಯಲ್ಲಿ ವಿಧಾನ ಸಭಾ ಚುನಾವಣಾ ನಡೆಯಲಿದ್ದು, ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷದ ನಡುವೆ ಕದನ ಜೋರಾಗಿದೆ. ದೆಹಲಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ ಈ ಬಾರಿ ಗೆಲುವು ಸಾಧಿಸುತ್ತಾ? ಇಲ್ಲಾ ಮೂರನೇ ಬಾರಿಗೂ ದೆಹಲಿ ಜನ ಕೇಜ್ರಿವಾಲ್ ಕೈ ಹಿಡಿಯುತ್ತಾರಾ ಎಂಬ ಕುತೂಹಲಕ್ಕೆ ಶನಿವಾರ ತೆರೆ ಬೀಳಲಿದೆ.
ನವದೆಹಲಿ: ದೆಹಲಿಯಲ್ಲಿ ವಿಧಾನ ಸಭಾ ಚುನಾವಣೆಯ (Delhi Election 2025) ರಂಗೇರಿದೆ. ಫೆ 5 ರಂದು ದೆಹಲಿಯಲ್ಲಿ ಮತದಾನ ನಡೆಯಲಿದ್ದು, ಸರ್ವ ಪಕ್ಷಗಳು ಚುನಾವಣೆಗೆ ಸಿದ್ಧವಾಗಿದೆ. 70 ವಿಧಾನಸಭಾ ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಈಗ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ (Aam Admi Party) ಮತ್ತೊಮ್ಮೆ ಗದ್ದುಗೆಗೆ ಏರಲು ಸಜ್ಜಾಗಿದ್ದರೆ, ಆಪ್ ಪಕ್ಷವನ್ನು ಅಧಿಕಾರದಿಂದ ಇಳಿಸಲು ಬಿಜೆಪಿಯನ್ನು ಬಿಜೆಪಿ (BJP) ತಯಾರಿ ನಡೆಸುತ್ತಿದೆ.
ಕಳೆದ ವರ್ಷ ಅಬಕಾರಿ ಹಗರಣದಲ್ಲಿ ಜೈಲು ಸೇರಿದ್ದ ಕೇಜ್ರಿವಾಲ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ರಾಜಿನಾಮೆ ಬಳಿಕ ಇದು ಅವರ ಮೊದಲ ಚುನಾವಣೆ ಆಗಿದೆ. ಪ್ರತಿಷ್ಠೆಯ ಹೋರಾಟದಂತೆ ಕಾಣುವ ಈ ಚುನಾವಣೆಯಲ್ಲಿ, ಅರವಿಂದ್ ಕೇಜ್ರಿವಾಲ್ ತಮ್ಮ ಭದ್ರಕೋಟೆಯಾದ ನವದೆಹಲಿಯಲ್ಲಿ ಸತತ ನಾಲ್ಕನೇ ಗೆಲುವಿನತ್ತ ಕಣ್ಣಿಟ್ಟಿದ್ದಾರೆ. 2013 ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿಯಿಂದ ಬಿಜೆಪಿಯ ಪರ್ವೇಶ್ ಸಿಂಗ್ ವರ್ಮಾ ಹಾಗೂ ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಅವರು ಸ್ಪರ್ಧಿಸಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಜಂಗ್‌ಪುರದಿಂದ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಹಿಂದೆ 2015 ಮತ್ತು 2020ರಲ್ಲಿ ಆಪ್‌ನ ಪ್ರವೀಣ್ ಕುಮಾರ್ ಗೆದ್ದಿದ್ದರು.
ದೆಹಲಿ ಮುಖ್ಯಮಂತ್ರಿ ಕಲ್ಕಾಜಿ ಕ್ಷೇತ್ರದಿಂದ ಸರ್ಧೆ ಮಾಡುತ್ತಿದ್ದು, ಬಿಜೆಪಿಯಿಂದ ಮಾಜಿ ಸಂಸದ ರಮೇಶ್ ಬಿಧುರಿ ಅವರು ಸ್ಪರ್ಧೆ ಮಾಡಲಿದ್ದಾರೆ. ಕಾಂಗ್ರೆಸ್‌ನ ಫೈರ್‌ಬ್ರಾಂಡ್ ನಾಯಕಿ ಅಲ್ಕಾ ಲಾಂಬಾ ಕೂಡ ಸ್ಪರ್ಧೆಯಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 2020 ರಲ್ಲಿ, ಅತಿಶಿ ಬಿಜೆಪಿಯ ಧರಂಬೀರ್ ಸಿಂಗ್ ವಿರುದ್ಧ 11,393 ಮತಗಳ ಅಂತರದಿಂದ ಸ್ಥಾನವನ್ನು ಪಡೆದರು. ಮಾಳವೀಯ ನಗರವು ನಿರ್ಣಾಯಕ ರಣರಂಗವಾಗಿದ್ದು, ಎಎಪಿಯ ಹಿರಿಯ ನಾಯಕ ಸೋಮನಾಥ್ ಭಾರ್ತಿ ಅವರು ಮೂರನೇ ಬಾರಿಗೆ ಸ್ಪರ್ಧೆ ಮಾಡುತ್ತಿದ್ದಾರೆ. ಬಿಜೆಪಿಯಿಂದ ಸತೀಶ್ ಉಪಾಧ್ಯಾಯ ಹಾಗೂ ಕಾಂಗ್ರೆಸ್ನಿಂದ ಜಿತೇಂದ್ರ ಕುಮಾರ್ ಕೊಚಾರ್ ಅವರು ಸ್ಪರ್ಧಿಸಲಿದ್ದಾರೆ.
ಈ ಸುದ್ದಿಯನ್ನೂ ಓದಿ: Arvind Kejriwal : ದೆಹಲಿ ಚುನಾವಣೆ ಪ್ರಚಾರ; ಬೀದಿ ಬದಿಯಲ್ಲಿ ವೆಜಿಟೇಬಲ್ ಮೊಮೊ ಸೇವಿಸಿದ ಕೇಜ್ರಿವಾಲ್
ಈ ನಡುವೆ ಚುನಾವಣೆಯನ್ನು ನ್ಯಾಯಸಮತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ರೀತಿಯಲ್ಲಿ ತಯಾರಿ ನಡೆಸಿದೆ. 3 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಎಲ್ಲವೂ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಆದ್ದರಿಂದ ಚುನಾವಣಾ ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದೆ. 150 ಪ್ಯಾರಾ ಮಿಲಿಟರಿ ಪಡೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಅಲ್ಲದೇ ದೆಹಲಿಯ ತುಂಬಾ 30,000 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.