Delhi Election Result: ದಿಲ್ಲಿ ದಂಗಲ್‌-ನಾಳೆ ಫಲಿತಾಂಶ ಪ್ರಕಟ; ಆಪ್‌-ಬಿಜೆಪಿಗೆ ಢವಢವ

ದೆಹಲಿ ವಿಧಾನಸಭೆ ಚುನಾವಣೆ ನಾಳೆ ಪ್ರಕಟಗೊಳ್ಳಲಿದ್ದು, ಬೆಳಗ್ಗೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಒಟ್ಟು 70 ಕ್ಷೇತ್ರದ 699 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಾಳೆ ಬಹಿರಂಗಗೊಳ್ಳಲಿದೆ. ಈ ಬಾರೀ ಚುನಾವಣೋತ್ತರ ಸಮೀಕ್ಷೆಗಳು ದಿಲ್ಲಿಯ ರಾಜಕೀಯ ಚಿತ್ರಣವನ್ನೇ ಬದಲಿಸುವ ನಿರೀಕ್ಷೆ ಮೂಡಿಸಿದೆ.

Del
Profile Rakshita Karkera Feb 7, 2025 1:19 PM

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಾಳೆ ವಿಧಾನಸಭಾ ಚುನಾವಣೆ(Delhi Election 2025) ಫಲಿತಾಂಶ ಪ್ರಕಟಗೊಳ್ಳಲಿದ್ದು, ಮೂರು ಪ್ರಮುಖ ಪಕ್ಷಗಳ ಹಣೆಬರಹ ಬಹಿರಂಗಗೊಳ್ಳಲು ಕೌಂಟ್‌ಡೌನ್‌ ಶುರುವಾಗಿದೆ(Delhi Election Result). ಒಟ್ಟು 70 ಕ್ಷೇತ್ರಗಳ ಫಲಿತಾಂಶ ಇಡೀ ದೇಶದ ಕುತೂಹಲಕ್ಕೆ ಕಾರಣವಾಗಿದೆ. ಅದೂ ಅಲ್ಲದೇ ಈ ಬಾರೀ ಚುನಾವಣೋತ್ತರ ಸಮೀಕ್ಷೆಗಳು(Delhi Exit Poll Results 2025) ದಿಲ್ಲಿಯ ರಾಜಕೀಯ ಚಿತ್ರಣವನ್ನೇ ಬದಲಿಸುವ ನಿರೀಕ್ಷೆ ಮೂಡಿಸಿದೆ. ನಾಳೆ ಬೆಳಗ್ಗೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭಗೊಳ್ಳಲಿದ್ದು, ಒಟ್ಟು 70 ಕ್ಷೇತ್ರದ 699 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬಯಲಾಗಿದೆ.

ಚುನಾವಣಾ ಕಣದಲ್ಲಿದ್ದ ಮೂರು ಪ್ರಮುಖ ಪಕ್ಷಗಳೆಂದರೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್. ಈ ಬಾರಿ ಶೇ. 60.42 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇನ್ನು ಸರ್ಕಾರ ರಚನೆಗೆ ಕನಿಷ್ಠ 36 ಮ್ಯಾಜಿಕ್‌ ನಂಬರ್‌ ಆಗಿದ್ದು, ಈ ಫಲಿತಾಂಶಗಳು ಆಡಳಿತಾರೂಢ ಎಎಪಿ ರಾಜಧಾನಿಯಲ್ಲಿ ಸತತ ಮೂರನೇ ಅವಧಿಗೆ ಅಧಿಕಾರ ಹಿಡಿಯಬಹುದೇ ಅಥವಾ ಬರೋಬ್ಬರಿ27 ವರ್ಷಗಳ ನಂತರ ಬಿಜೆಪಿ ಗದ್ದುಗೆ ಏರಲಿದೆಯೇ ಎಂಬುದು ನಾಳೆ ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟವಾಗಲಿದೆ.

ಸಮೀಕ್ಷೆಗಳು ಹೇಳೋದೇನು?

ದಿಲ್ಲಿಯಲ್ಲಿ ಚುನಾವಣೋತ್ತರ ಸಮೀಕ್ಷೆ(Delhi Exit Poll Results 2025) ಪ್ರಕಟಗೊಂಡಿದ್ದು, ಬಿಜೆಪಿ (BJP) ಅಧಿಕಾರಕ್ಕೆ ಬರಲಿದೆ ಎಂದೇ ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ದಿಲ್ಲಿಯಲ್ಲಿ ಒಟ್ಟು 70 ಸೀಟುಗಳಿದ್ದು, ಮ್ಯಾಜಿಕ್‌ ನಂಬರ್‌ 36. ಒಟ್ಟು 10 ವಾಹಿನಿಗಳು ನಡೆಸಿದ ಸಮೀಕ್ಷೆ ಪ್ರಕಾರ ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಗದ್ದುಗೆಗೆ ಏರುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ: Delhi Election 2025: ದೆಹಲಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ? ಮತ್ತೆರಡು ಸಮೀಕ್ಷೆಗಳು ಪ್ರಕಟ

ಚಾಣಕ್ಯ ಸ್ಟ್ರಾಟಜಿಸ್, ಜೆವಿಸಿ, ಪೋಲ್ ಡೈರಿ, ಪಿ-ಮಾರ್ಕ್, ಪೀಪಲ್ಸ್ ಇನ್‌ಸೈಟ್‌ ಮತ್ತು ಪೀಪಲ್ಸ್ ಪಲ್ಸ್, ಟುಡೇಸ್ ಚಾಣಕ್ಯ, ಎಕ್ಸಿಸ್ ಮೈ ಇಂಡಿಯಾ ಮತ್ತು ಸಿಎನ್ಎಕ್ಸ್ ಮತಗಟ್ಟೆ ಮುಂತಾದ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ ಸರಳ ಬಹುಮತದ ಮೂಲಕ 27 ವರ್ಷಗಳ ಬಳಿಕ ದಿಲ್ಲಿಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.

2015 ಮತ್ತು 2020ರ ಚುನಾವಣೆಯಲ್ಲಿ ಏನಾಗಿತ್ತು?

2015ರ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆದ್ದು ಇತಿಹಾಸ ಬರೆದಿತ್ತು. ಉಳಿದ 3 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಕಾಂಗ್ರೆಸ್ ತನ್ನ ಖಾತೆಯನ್ನು ತೆರೆದಿರಲಿಲ್ಲ. ಆಪ್‌ 2020ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿತ್ತು. ಆ ಬಾರಿ 62 ಸ್ಥಾನಗಳನ್ನು ಗೆದ್ದುಕೊಂಡರೆ ಬಿಜೆಪಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್‌ ಸಾಧನೆ ಮತ್ತೆ ಶೂನ್ಯದಲ್ಲೇ ಮುಂದುವರಿದಿತ್ತು. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸುಮಾರು 27 ವರ್ಷಗಳ ಬಳಿಕ ಗದ್ದುಗೆಗೆ ಏರಿದಂತಾಗುತ್ತದೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?