Elections 2026: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ, ತಮಿಳುನಾಡಿನಲ್ಲಿ ಎಡಿಎಂಕೆಗೆ ಪೈಪೋಟಿ ನೀಡುತ್ತಿರುವ ಟಿವಿಕೆ
ಕೇರಳಂ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿಯ ವಿಧಾನ ಸಭಾ ಚುನಾವಣಾ ಮತ ಎಣಿಕೆ ಕಾರ್ಯ ಸೋಮವಾರ ಬೆಳಗ್ಗೆ ಆರಂಭವಾಗಿದೆ. ಈವರೆಗಿನ ಲೆಕ್ಕಾಚಾರದ ಪ್ರಕಾರ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದ್ದು, ತಮಿಳುನಾಡಿನಲ್ಲಿ ಎಡಿಎಂಕೆಗೆ ನಟ ವಿಜಯ್ ಅವರ ಪಕ್ಷ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮುನ್ನಡೆಯಲ್ಲಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ನಾಲ್ಕು ರಾಜ್ಯಗಳಾದ ಕೇರಳ (Kerala), ಪಶ್ಚಿಮ ಬಂಗಾಳ (west bengal), ಅಸ್ಸಾಂ (assam), ತಮಿಳುನಾಡು (tamil nadu) ಮತ್ತು ಒಂದು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ (puducherry) ವಿಧಾನ ಸಭಾ ಚುನಾವಣೆಯ (Assembly election) ಮತ ಎಣಿಕೆ ಕಾರ್ಯ ಸೋಮವಾರ ಬೆಳಗ್ಗೆ ಆರಂಭವಾಗಿದ್ದು, ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದ್ದು, ತಮಿಳುನಾಡಿನಲ್ಲಿ ಎಡಿಎಂಕೆಗೆ ನಟ ವಿಜಯ್ ಅವರ ಪಕ್ಷ ಟಿವಿಕೆ ಪ್ರಬಲ ಪೈಪೋಟಿಯನ್ನು ನೀಡಿದೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮುನ್ನಡೆಯಲ್ಲಿದೆ.
ಏಪ್ರಿಲ್ ತಿಂಗಳಲ್ಲಿ ನಡೆದ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ಬೆಳಗ್ಗೆ ಆರಂಭವಾಗಿದ್ದು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಆರಂಭದಿಂದಲೇ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ.
"ವಿದ್ಯುತ್ ಕಡಿತ, ಸಿಸಿಟಿವಿ ಆಫ್ ಮಾಡಲಾಗಿದೆ"; ಮತ ಎಣಿಕೆಗೂ ಮುನ್ನ ಮಮತಾ ಬ್ಯಾನರ್ಜಿ ಆರೋಪ
ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ - ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಚುನಾವಣಾ ಕಾಲವಾಗಿತ್ತು. ಮತ ಎಣಿಕೆ ಆರಂಭವಾಗಿದೆ. ದಿನದ ಅಂತ್ಯದ ವೇಳೆಗೆ ಯಾವ ರಾಜಕೀಯ ಪಕ್ಷಗಳು ಉಳಿಯಲಿವೆ ಅಥವಾ ಅಧಿಕಾರ ವಹಿಸಿಕೊಳ್ಳಲಿವೆ ಎಂಬುದು ಸ್ಪಷ್ಟವಾಗುತ್ತದೆ.
294 ಸ್ಥಾನಗಳಿರುವ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡೆವೆ ನೇರ ಹೋರಾಟವಿದ್ದು, ಇದರಲ್ಲಿ ಈಗ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ತಮಿಳುನಾಡಿನಲ್ಲಿ 234 ಸ್ಥಾನಗಳಿಗೆನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಹೊಸ ಪಕ್ಷವು ಕಾಂಗ್ರೆಸ್ ಮತ್ತು ಎಡಿಎಂಡಿಕೆ ಮೈತ್ರಿ ಕೂಟದ ವಿರುದ್ಧ ಹೋರಾಟ ಮಾಡುತ್ತಿದ್ದು, ಇದರಲ್ಲಿ ಟಿವಿಕೆ ಮುನ್ನಡೆಯಲ್ಲಿದೆ. ಬಿಜೆಪಿ ಮತ್ತು ಪಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆ ಮೂರನೇ ಸ್ಥಾನದಲ್ಲಿದೆ.
ಅಸ್ಸಾಂನಲ್ಲಿ 126 ವಿಧಾನಸಭಾ ಸ್ಥಾನಗಳಿದ್ದು, ಇಲ್ಲಿ ಬಿಜೆಪಿ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದೆ. ಕಾಂಗ್ರೆಸ್ ಬಿಜೆಪಿಗೆ ಪೈಪೋಟಿ ನೀಡುವ ದಾರಿಯಲ್ಲಿದ್ದು, ಕಠಿಣ ಸವಾಲು ಒಡ್ಡುವ ನಿರೀಕ್ಷೆಯೂ ಇದೆ.
140 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಕೇರಳದಲ್ಲಿ ಎಡರಂಗ ಪಕ್ಷವಾದ ಎಲ್‌ಡಿಎಫ್ ಸತತ ಮೂರನೇ ಅವಧಿಗೆ ಗೆಲ್ಲಲು ಎದುರು ನೋಡುತ್ತಿದ್ದರೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಈಗ ಮುನ್ನಡೆಯಲ್ಲಿದೆ. ಸಿಪಿಐ (ಎಂ) ಎರಡನೇ ಸ್ಥಾನದಲ್ಲಿದ್ದು, ಯುಡಿಎಫ್ ಪೈಪೋಟಿ ನೀಡುತ್ತಿದೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ ಗೆಲುವು; ಅಧಿಕೃತ ಘೋಷಣೆ
ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ 30 ಸ್ಥಾನಗಳಿಗೆ ನಡೆಯುತ್ತಿರುವ ಮತ ಎಣಿಕೆಯಲ್ಲಿ ಎನ್. ರಂಗಸ್ವಾಮಿ ನೇತೃತ್ವದ ಎಐಎನ್‌ಆರ್‌ಸಿ ಮುನ್ನಡೆಯನ್ನು ಸಾಧಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸಾಕಷ್ಟು ಹಿನ್ನಡೆಯನ್ನು ಅನುಭವಿಸಿದೆ. ಹೀಗಾಗಿ ಇವುಗಳು ಎಐಎನ್‌ಆರ್‌ಸಿಗೆ ಪೈಪೋಟಿ ನೀಡುವುದು ಕಠಿಣವಾಗಿದೆ.