ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bagalkot By-Election Results 2026: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

Karnataka Bypoll Results: ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ಕ್ಷೇತ್ರದಲ್ಲಿ ಎಚ್ ವೈ ಮೇಟಿ ಅವರ ಪುತ್ರ ಉಮೇಶ್‌ ಮೇಟಿ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದೀಗ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

ಬಾಗಲಕೋಟೆ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಮತ್ತು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ. -

Prabhakara R
Prabhakara R May 4, 2026 12:29 PM

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ (Bagalkot By-Election Results 2026) ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ (Umesh Meti) ಅವರು ಜಯಭೇರಿ ಬಾರಿಸಿದ್ದಾರೆ. ಇಂದು ನಗರದ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ನಡೆದಿದ್ದು, ಬಿಜೆಪಿಯ ವೀರಣ್ಣ ಚರಂತಿಮಠ್​​ಗೆ ಒಟ್ಟು 76,075 ಮತಗಳು ಬಿದ್ದಿದ್ದರೆ, ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್​​ ಮೆಟಿ ಪರ 97,941 ಮತ​​ ಚಲಾವಣೆ ಆಗಿವೆ. ಹೀಗಾಗಿ 21,866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.

21ನೇ ಸುತ್ತಿನ ಅಂತ್ಯದ ವೇಳೆಗೆ ಕೈ ಅಭ್ಯರ್ಥಿ ಉಮೇಶ್‌ ಮೇಟಿ ಅವರು 87,624 ಮತ ಪಡೆಯುವ ಮೂಲಕ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ (Veeranna Charantimath-70,419 ಮತ) ವಿರುದ್ಧ 17,205 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆಗಾಗಿ 14 ಟೇಬಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. 23 ಸುತ್ತುಗಳಲ್ಲಿ ಎಣಿಕೆ ಕಾರ್ಯ ನಡೆದಿದೆ. ಅಂಚೆ ಮತ ಪತ್ರಗಳ ಎಣಿಕೆಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆಯನ್ನು ಮಾಡಲಾಗಿತ್ತು.

ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ಕ್ಷೇತ್ರದಲ್ಲಿ ಹಿರಿಯ ಶಾಸಕರಾಗಿದ್ದ ಎಚ್ ವೈ ಮೇಟಿ ಅವರ ಪುತ್ರ ಉಮೇಶ್‌ ಮೇಟಿ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡು ಬಂದ ಉಮೇಶ್‌ ಮೇಟಿ ಸುಮಾರು 18 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಉಮೇಶ್‌ ಮೇಟಿ ಅವರ ತಂದೆ, ಮಾಜಿ ಸಚಿವ ಎಚ್‌ವೈ ಮೇಟಿ ಅವರು ಬಾಗಲಕೋಟೆ ರಾಜಕಾರಣದಲ್ಲಿ ದಶಕಗಳ ಕಾಲ ಪ್ರಭಾವ ಹೊಂದಿರುವ ನಾಯಕ. ಅವರ ನಿಧನದ ಹಿನ್ನೆಲೆಯಲ್ಲಿ ಉಂಟಾದ ಅನುಕಂಪವು ಮತಗಳಾಗಿ ಪರಿವರ್ತನೆಯಾಗಿರುವುದು ಈ ಗೆಲುವಿನ ಪ್ರಮುಖ ಕಾರಣವಾಗಿದೆ.

ಜತೆಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಹುಕಾಲದ ಆಪ್ತ ಎಚ್‌ವೈ ಮೇಟಿಯವರ ಪುತ್ರನನ್ನು ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರಲೇಬೇಕು ಎಂದು ಪಣತೊಟ್ಟಿದ್ದರು. ಇದಕ್ಕಾಗಿಯೇ ಒಂದು ವಾರ ಬಾಗಲಕೋಟೆಯಲ್ಲಿಯೇ ಇದ್ದು ಪ್ರಚಾರ ನಡೆಸಿದ್ದರು. ಸಿಎಂ ಮಾತ್ರಲ್ಲದರೆ ಸಚಿವರು, ಪ್ರಭಾವಿ ನಾಯಕರ ದಂಡೇ ಪ್ರಚಾರಕ್ಕೆ ಆಗಮಿಸಿತ್ತು. ಇನ್ನು ಕ್ಷೇತ್ರದಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರೇ ಹೆಚ್ಚಿದ್ದು, ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರಂಟಿಗಳು ಮಹಿಳಾ ಮತದಾರರ ಮೇಲೆ ಪ್ರಭಾವ ಬೀರಿದೆ