Delhi Election 2025: ದೆಹಲಿ ಚುನಾವಣೆ: ಕಾಂಗ್ರೆಸ್ ʼಶೂನ್ಯʼ ಸಾಧನೆ-ʼಗ್ಯಾರಂಟಿʼ ಫ್ಲಾಪ್!
ಬಹು ನಿರೀಕ್ಷಿತ ದೆಹಲಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಬಿಜೆಪಿ ಭಾರೀ ಮುನ್ನಡೆಯನ್ನು ಸಾಧಿಸಿದೆ. 70 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಮುನ್ನಡೆಯಲ್ಲಿದ್ದು, ಆಪ್ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲೂ ಮುನ್ನಡೆಯಲ್ಲಿಲ್ಲ.
![ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ʼಶೂನ್ಯʼ ಸಾಧನೆ!](https://cdn-vishwavani-prod.hindverse.com/media/original_images/Delhi_Election_2025_6.jpg)
Delhi Election 2025
![Profile](https://vishwavani.news/static/img/user.png)
ನವದೆಹಲಿ: ಬಹು ನಿರೀಕ್ಷಿತ ದೆಹಲಿ ಚುನಾವಣೆಯ(Delhi Election 2025) ಮತ ಎಣಿಕೆ ಪ್ರಾರಂಭವಾಗಿದ್ದು, ಬಿಜೆಪಿ(BJP) ಭಾರೀ ಮುನ್ನಡೆಯನ್ನು ಸಾಧಿಸಿದೆ. 70 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಮುನ್ನಡೆಯಲ್ಲಿದ್ದು, ಆಪ್ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್(Congress) ಯಾವುದೇ ಕ್ಷೇತ್ರದಲ್ಲೂ ಮುನ್ನಡೆಯಲ್ಲಿಲ್ಲ. ಶೂನ್ಯ ಸಾಧನೆಯನ್ನು ತೋರಿಸಿದೆ. ಪ್ರಬಲ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ರಾಷ್ಟ್ರ ರಾಜಧಾನಿ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲೂ ಹೀನಾಯವಾಗಿ ಸೋಲುವ ಸಾಧ್ಯತೆಯಿದೆ. ಈ ಬಾರಿ ಮತದಾರ ಬಿಜೆಪಿ ಕೈ ಹಿಡಿಯುವ ಸಾಧ್ಯತೆಯಿದೆ. ಕಾಂಗ್ರೆಸ್ ಕರ್ನಾಟಕ ಮಾದರಿಯ ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದರೂ ಮತದಾರ ಕೈಬಿಟ್ಟಿದ್ದಾನೆ.
Supriya Shrinate after winning 00 seats & having 2% vote share in Delhi elections. pic.twitter.com/YzO2Powb4k
— Incognito (@Incognito_qfs) February 8, 2025
ವ್ಯಂಗ್ಯವಾಡಿದ ಒಮರ್ ಅಬ್ದುಲ್ಲಾ
ದೆಹಲಿ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮತ ಎಣಿಕೆಯಲ್ಲಿ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಇದರ ನಡುವೆ ಇಂಡಿ ಒಕ್ಕೂಟದ ಮಿತ್ರಪಕ್ಷ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಮತ್ತು ಜಮ್ಮು ಕಾಶ್ಮೀರ್ದ ಮುಖ್ಯಮಂತ್ರಿ ಒಮರ್ ಅಬ್ದುಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು. ಇಂಡಿ ಒಕ್ಕೂಟದಲ್ಲಿರುವ ಆಂತರಿಕ ಭಿನ್ನಾಭಿಪ್ರಾಯದ ಬಗ್ಗೆ ವ್ಯಂಗ್ಯವಾಡಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಭಾರತದ ಮಿತ್ರಪಕ್ಷ ಒಮರ್ ಅಬ್ದುಲ್ಲಾ ಅವರು ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್ ಖಾತೆಯಲ್ಲಿ ಆಪ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದರು. . ಸಂತರೊಬ್ಬರ ಮೀಮ್ ಶೇರ್ ಮಾಡಿರುವ ಒಮರ್ ಅಬ್ದುಲ್ಲಾ “ಔರ್ ಲಡೋ ಆಪಾಸ್ ಮೇ!!!” (ಇನ್ನು ಒಳ ಜಗಳ ಮಾಡಿಕೊಳ್ಳಿ) ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಇಂಡಿಯಾ ಒಕ್ಕೂಟದಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದಿಂದ ಮತ್ತೊಬ್ಬರಿಗೆ ಲಾಭವಾಗುತ್ತಿದೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ:Delhi Election 2025: ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನ? ಆಪ್‌ಗೆ ಭ್ರಷ್ಟಾಚಾರವೇ ಮುಳುವಾಯ್ತ?
ಇನ್ನು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರೀನಾಟೆ ಆಪ್ ಪಕ್ಷವನ್ನು ಗೆಲ್ಲಿಸುವುದು ಕಾಂಗ್ರೆಸ್ ಪಕ್ಷದ ಜವಾಬ್ದಾರಿಯಲ್ಲ ಎಂದು ಹೇಳಿದ್ದಾರೆ.