ಕೇರಳ: ಕೇರಳ (Kerala) ವಿಧಾನ ಸಭಾ ಚುನಾವಣೆ 2026ರ (Election Results 2026) ಮತ ಎಣಿಕೆಯ ಆರಂಭದಿಂದಲೇ ಕಾಂಗ್ರೆಸ್ (Congress) ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಮುನ್ನಡೆಯನ್ನು ಕಾಯ್ದುಕೊಂಡಿದೆ. ಒಟ್ಟು 140 ವಿಧಾನ ಸಭಾ ಸ್ಥಾನಗಳನ್ನು ಹೊಂದಿರುವ ಕೇರಳದಲ್ಲಿ ಈಗಾಗಲೇ 50 ಸ್ಥಾನಗಳನ್ನು ಗೆದ್ದುಕೊಂಡಿರುವ ಯುಡಿಎಫ್ 13 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಕಾಂಗ್ರೆಸ್ ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಕುರಿತು ಚರ್ಚೆಗಳು ಆರಂಭವಾಗಿದೆ. ಕೇರಳದಮುಖ್ಯಮಂತ್ರಿ ಸ್ಥಾನಕ್ಕೆ ಮೂವರು ಹಿರಿಯ ಕಾಂಗ್ರೆಸ್ ನಾಯಕರು ಸ್ಪರ್ಧೆಯಲ್ಲಿದ್ದಾರೆ.
ಕೇರಳ ವಿಧಾನಸಭಾ ಚುನಾವಣಾ ಮತ ಎಣಿಕೆಯ ಆರಂಭದಿಂದಲೂ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮುನ್ನಡೆಯನ್ನು ಸಾಧಿಸಿದೆ. ಇದು ರಾಜ್ಯದಲ್ಲಿ ಅಧಿಕಾರ ಪಡೆಯುವ ಭರವಸೆಯನ್ನು ಕೊಟ್ಟಿದೆ.
'ಎಡಪಂಥೀಯ ಮುಕ್ತ ಭಾರತ'; 50 ವರ್ಷಗಳಲ್ಲಿ ಕಮ್ಯುನಿಸ್ಟರಿಗೆ ಇದೇ ಮೊದಲ ಬಾರಿಗೆ ಅಧಿಕಾರವಿಲ್ಲ
ಚುನಾವಣಾ ಆಯೋಗದ ವೆಬ್‌ಸೈಟ್ ಮಾಹಿತಿ ಪ್ರಕಾರ ಸಂಜೆ ಸುಮಾರು ೫ ಗಂಟೆ ವೇಳೆಗೆ ಕಾಂಗ್ರೆಸ್ 55 ಸ್ಥಾನಗಳನ್ನು ಗೆದ್ದಿದೆ.ಸಿಪಿಐ(ಎಂ) ನೇತೃತ್ವದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಕೇವಲ 23 ಕ್ಷೇತ್ರಗಳನ್ನು ಗೆದ್ದಿದೆ.
ಮುಂದಿನ ಸಿಎಂ ಯಾರು?
ಚುನಾವಣೆ ಫಲಿತಾಂಶ ಸ್ಪಷ್ಟವಾಗುತ್ತಿದ್ದಂತೆ ಕೇರಳದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಆರಂಭವಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕೇರಳ ಉಸ್ತುವಾರಿ ದೀಪಾ ದಾಸ್‌ಮುನ್ಷಿ ಅವರು ಯುಡಿಎಫ್ ಮಿತ್ರಪಕ್ಷಗಳು ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಅಭ್ಯರ್ಥಿಯ ನಿರ್ಧಾರವನ್ನು ಕಾಂಗ್ರೆಸ್‌ಗೆ ಬಿಟ್ಟಿವೆ. ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ್ದೇವೆ. ಕಾಂಗ್ರೆಸ್ ಏನು ನಿರ್ಧರಿಸಿದರೂ ಅವರು ಅದರೊಂದಿಗೆ ಹೋಗುತ್ತಾರೆ ಎಂದು ಈಗಾಗಲೇ ಹೇಳಿದ್ದಾರೆ.
ಕೇರಳದಲ್ಲಿ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಮಾಜಿ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ.
ಮತದಾರರ ಸಮೀಕ್ಷೆ ಆಧಾರದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸತೀಶನ್ ಹೆಚ್ಚಿನ ಆದ್ಯತೆ ಪಡೆದಿದ್ದಾರೆ. ಇವರನ್ನು ಶೇಕಡಾ 21ರಷ್ಟು ಮಂದಿ ಬೆಂಬಲಿಸಿದ್ದಾರೆ. ಅನಂತರ ಚೆನ್ನಿತ್ತಲ ಅವರನ್ನು ಶೇ.8, ಕೆ. ಸಿ. ವೇಣುಗೋಪಾಲ್ ಅವರನ್ನು ಶೇ. 3ರಷ್ಟು ಮಂದಿ ಬೆಂಬಲಿಸಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಮತ್ತು ತಿರುವನಂತಪುರಂ ಸಂಸದ ಶಶಿ ತರೂರ್ ಅವರು ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.