ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು: ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿನಂದನೆ

ವಿಧಾನ ಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿನಂದಿಸಿದ್ದಾರೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆದ್ದಿದೆ. ಇದೊಂದು ಐತಿಹಾಸಿಕ ವಿಜಯ ಎಂದು ಟ್ರಂಪ್ ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆ

ಸಂಗ್ರಹ ಚಿತ್ರ -

ನವದೆಹಲಿ: ಪಶ್ಚಿಮ ಬಂಗಾಳದ (west bengal) ವಿಧಾನ ಸಭಾ ಚುನಾವಣೆಯಲ್ಲಿ (assembly election) ಭಾರತೀಯ ಜನತಾ ಪಕ್ಷ (BJP) ಗೆಲುವು ಸಾಧಿಸಿರುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (US President Donald Trump) ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಅಭಿನಂದಿಸಿದ್ದಾರೆ. ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಇದು ಐತಿಹಾಸಿಕ ಗೆಲುವು ಎಂದು ಅವರು ಹೇಳಿದ್ದಾರೆ. 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯ 206 ಸ್ಥಾನಗಳನ್ನು ಬಿಜೆಪಿ ಗೆದ್ದು (election 2026) ಬಹುಮತದ ಗಡಿಯನ್ನು ದಾಟಿದೆ.

ಈ ಕುರಿತು ಶ್ವೇತಭವನದ ವಕ್ತಾರ ಕುಶ್ ದೇಸಾಯಿ ಅವರು ಹೇಳಿಕೆ ನೀಡಿದ್ದು, ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಮತ್ತು ನಿರ್ಣಾಯಕ ಗೆಲುವಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದಾರೆ ಎಂದು ಹೇಳಿದರು.

ಕೋಮು ಸೌಹಾರ್ದತೆ ಎಂದರೆ ಇದು; ಮುಸ್ಲಿಂ ವ್ಯಕ್ತಿಯ ಅಂತ್ಯಕ್ರಿಯೆ ಮೆರವಣಿಗೆಗೆ ದಾರಿ ಕೊಡಲು ವಿಜಯೋತ್ಸವವನ್ನೇ ನಿಲ್ಲಿಸಿದ ಬಿಜೆಪಿ ಕಾರ್ಯಕರ್ತರು

ಮಮತಾ ಬ್ಯಾನರ್ಜಿ ನೇತೃತ್ವದ ತೃಣ ಮೂಲ ಕಾಂಗ್ರೆಸ್ ನ ಭದ್ರಕೋಟೆಯನ್ನು ಭೇದಿಸಿರುವ ಬಿಜೆಪಿ ಪಶ್ಚಿಮ ಬಂಗಾಳ ವಿಧಾನಸಭೆಯ 206 ಸ್ಥಾನಗಳನ್ನು ಗೆದ್ದುಕೊಂಡಿದೆ. ಚುನಾವಣಾ ಅಪರಾಧಗಳ ಕಾರಣದಿಂದ ಫಾಲ್ಟಾ ಕ್ಷೇತ್ರದ ಮತದಾನವನ್ನು ಭಾರತೀಯ ಚುನಾವಣಾ ಆಯೋಗವು ರದ್ದುಗೊಳಿಸಿದೆ. ಇಲ್ಲಿ ಬಿಜೆಪಿ ಬಹುಮತ ಸಾಧಿಸುವ ಮೂಲಕ ತೃಣಮೂಲ ಕಾಂಗ್ರೆಸ್‌ನ ಒಂದು ದಶಕದ ಆಡಳಿತ ಕೊನೆಯಾಗಿದೆ.

ಮಮತಾ ಬ್ಯಾನರ್ಜಿ ಅವರ ಎದುರು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಭವಾನಿಪುರ ಮತ್ತು ನಂದಿಗ್ರಾಮ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಇಳಿದಿದ್ದು, ಎರಡರಲ್ಲೂ ಗೆಲುವು ದಾಖಲಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಅರಳಿದ ಕಮಲ: ಖಾಕಿ ಪಡೆಗಳಿಂದಲೂ ಭರ್ಜರಿ ಸಂಭ್ರಮಾಚರಣೆ

ಚುನಾವಣೆಯಲ್ಲಿ ಸೋತಿರುವ ಮಮತಾ ಬ್ಯಾನರ್ಜಿ ಅವರು ಚುನಾವಣೆಯ ತೀರ್ಪು ನಿಜವಾದ ಸಾರ್ವಜನಿಕ ಆದೇಶವಲ್ಲ. ಅದು ಪಿತೂರಿಯ ಫಲಿತಾಂಶವಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ನಾವು ನೈತಿಕವಾಗಿ ಗೆದ್ದಿದ್ದೇವೆ.ಚುನಾವಣಾ ಆಯೋಗದ ಮೂಲಕ ಅವರು ನಮ್ಮನ್ನು ಸೋಲಿಸುವ ಪ್ರಯತ್ನ ಮಾಡಿದ್ದಾರೆ. ನಾನು ಹಿಂದೆ ಬೀದಿಗಳಲ್ಲಿದ್ದೆ, ಇನ್ನು ಮುಂದೆಯೂ ಇರುತ್ತೇನೆ. ಬಿಜೆಪಿಯ ದೌರ್ಜನ್ಯಗಳನ್ನು ನಾನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.